ನವದೆಹಲಿ:ಕಳೆದ 24 ಗಂಟೆಗಳಲ್ಲಿ 1409 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರುವ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗ್ರವಾಲ್, 'ಕಳೆದ 24 ಗಂಟೆಗಳಲ್ಲಿ 1409 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇಲ್ಲಿಯವರೆಗೂ ದೇಶದಾದ್ಯಂತ 21,393 ಪ್ರಕರಣಗಳು ಬೆಳಕಿಗೆ ಬಂದಿವೆ' ಎಂದು ತಿಳಿಸಿದ್ದಾರೆ.
'ಕಳೆದ 28 ದಿನಗಳಲ್ಲಿ ದೇಶದ 12 ಜಿಲ್ಲೆಗಳಲ್ಲಿ ಹೊಸ ಪ್ರಕರಣ ದಾಖಲಾಗಿಲ್ಲ. ಕಳೆದ 14 ದಿನಗಳಲ್ಲಿ 78 ಜಿಲ್ಲೆಗಳಲ್ಲಿ (23 ರಾಜ್ಯ/ಕೇಂದ್ರಾಡಳಿತ ಪ್ರದೇಶ) ಯಾವುದೇ ಹೊಸ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ' ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಸ್ಪಷ್ಟಪಡಿಸಿದೆ.
ದೇಶದಾದ್ಯಂತ ದಾಖಲಾಗಿರುವ ಒಟ್ಟು 21,393 ಕೋವಿಡ್–19 ಪ್ರಕರಣಗಳ ಪೈಕಿ 4,257 ಮಂದಿ ಗುಣಮುಖರಾಗಿದ್ದಾರೆ. ವಿವಿಧ ರಾಜ್ಯಗಳಲ್ಲಿ 16,454 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 681 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.