ADVERTISEMENT

Covid-19 India Update: ಮಹಾರಾಷ್ಟ್ರದಲ್ಲಿ 47,470 ಜನರಿಗೆ ಕೋವಿಡ್ ಲಸಿಕೆ

ಏಜೆನ್ಸೀಸ್
Published 27 ಜನವರಿ 2021, 16:31 IST
Last Updated 27 ಜನವರಿ 2021, 16:31 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 12,689 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 137 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ ಒಟ್ಟು 1,06,89,527 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,53,724 ಮಂದಿ ಸಾವಿಗೀಡಾಗಿದ್ದಾರೆ.

1,03,59,305 ಸೋಂಕಿತರು ಗುಣಮುಖರಾಗಿದ್ದು, 1,76,498 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಈ ವರೆಗೆ 20,29,424 ಜನರಿಗೆ ಲಸಿಕೆ ನೀಡಲಾಗಿದೆ.

ಮಹಾರಾಷ್ಟ್ರದಲ್ಲಿ 47,470 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ

ಮಹಾರಾಷ್ಟ್ರದ 528 ಕೇಂದ್ರಗಳಲ್ಲಿ ಬುಧವಾರ 47,470 ಆರೋಗ್ಯ ಕಾರ್ಯಕರ್ತರು ಅಥವಾ ಉದ್ದೇಶಿತ ಕಾರ್ಮಿಕರಿಗೆ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಮೂಲಕ ಒಟ್ಟಾರೆ 1,78,371 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ ಎಂದು ರಾಜ್ಯ ಸಾರ್ವಜನಿಕ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಪ್ರದೀಪ್ ವ್ಯಾಸ್ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ 173 ಹೊಸ ಪ್ರಕರಣ

ಉತ್ತರ ಪ್ರದೇಶದಲ್ಲಿ ಬುಧವಾರ ಹೊಸದಾಗಿ 173 ಜನರಿಗೆ ಕೋವಿಡ್ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆಯು 5,99,376ಕ್ಕೆ ಏರಿಕೆಯಾಗಿದೆ. ನಾಲ್ಕು ಜನರು ಸಾವಿಗೀಡಾಗುವುದರೊಂದಿಗೆ, ಮೃತರ ಸಂಖ್ಯೆ 8,636ಕ್ಕೆ ಏರಿಕೆಯಾಗಿದೆ.

ಈ ಪೈಕಿ ಲಕನೌನಲ್ಲಿ 42 ಮತ್ತು ಮೀರತ್‌ನಲ್ಲಿ 14 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇದೇ ವೇಳೆ ರಾಜ್ಯದಲ್ಲಿ 333 ಜನರು ಗುಣಮುಖರಾಗಿದ್ದು, ಈವರೆಗೂ 5,84,372 ಜನರು ಚೇತರಿಸಿಕೊಂಡಿದ್ದಾರೆ.

ಚಂಡೀಗಡಲ್ಲಿ 40 ಹೊಸ ಪ್ರಕರಣ

ಕಳೆದ 24 ಗಂಟೆಗಳ ಅವಧಿಯಲ್ಲಿ ಚಂಡೀಗಡದಲ್ಲಿ 40 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 20,819 ಜನರು ಈವರೆಗೆ ಸೋಂಕಿತರಾಗಿದ್ದಾರೆ. ಈವರೆಗೂ 334 ಜನರು ಮೃತಪಟ್ಟಿದ್ದಾರೆ. ಸದ್ಯ 146 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.