ನವದೆಹಲಿ: ಕಳೆದ 24 ಗಂಟೆಗಳಲ್ಲಿ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) 21 ಸಿಬ್ಬಂದಿಯಲ್ಲಿಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ ಎಂದು ಬಿಎಸ್‌ಎಫ್ ತಿಳಿಸಿದೆ.
ಕೊರೊನಾ ಸೋಂಕು ಪತ್ತೆಯಾಗಿರುವ ನೌಕರರು ಗೊತ್ತುಪಡಿಸಿದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಲ್ಲಿಯವರೆಗೂ ಕೊರೊನಾ ಸೋಂಕು ಪತ್ತೆಯಾಗಿದ್ದ ಒಟ್ಟು ಸಿಬ್ಬಂದಿಯಲ್ಲಿ 286 ಜನರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಈಗ ಗಡಿ ಭದ್ರತಾ ಪಡೆಗೆ ಸಂಬಂಧಿಸಿದ 120 ಕೊರೊನಾ ಪ್ರಕರಣಗಳು ಕ್ರಿಯಾಶೀಲವಾಗಿವೆ ಎಂದು ಬಿಎಸ್‌ಎಫ್ ಸ್ಪಷ್ಟಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.