ADVERTISEMENT

Covid-19 India Update | 2.27 ಲಕ್ಷಕ್ಕೂ ಅಧಿಕ ಪ್ರಕರಣ ಸಕ್ರಿಯ, 18,213 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಜುಲೈ 2020, 4:53 IST
Last Updated 3 ಜುಲೈ 2020, 4:53 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಹರಡುವಿಕೆ ತೀವ್ರಗೊಳ್ಳುತ್ತಲೇ ಇದ್ದು, ಗುರುವಾರವೂ ಸಾವಿರಾರು ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 6,25,544ಕ್ಕೆ ತಲುಪಿದ್ದು, 3,79,892 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವರದಿ ನೀಡಿದೆ.

2,27,439 ಪ್ರಕರಣಗಳು ಕ್ರಿಯಾಶೀಲವಾಗಿದ್ದು, 18,213 ಜನರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ADVERTISEMENT

ಕೊರೊನಾ ಸೋಂಕಿನ ಕೇಂದ್ರಬಿಂದುವಾಗಿರುವ ಮಹಾರಾಷ್ಟ್ರದಲ್ಲಿ ಈವರೆಗೆ 1,86,626 ಜನರು ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 8,178 ಮಂದಿ ಮೃತಪಟ್ಟಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿಯೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಈವರೆಗೆ 92,175 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 26, 304 ಪ್ರಕರಣಗಳು ಕ್ರಿಯಾಶೀಲವಾಗಿದ್ದು, 2,864 ಮಂದಿ ಮೃತರಾಗಿದ್ದಾರೆ.

ತಮಿಳುನಾಡಿನಲ್ಲಿ 98,392, ಗುಜರಾತ್‌ನಲ್ಲಿ 33,913, ಉತ್ತರ ಪ್ರದೇಶದಲ್ಲಿ 24, 825, ಮದ್ಯಪ್ರದೇಶದಲ್ಲಿ 14,106, ತೆಲಂಗಾಣದಲ್ಲಿ 18,570 ಕೊರೊನಾ ಪ್ರಕರಣಗಳು ದೃಢಪಟ್ಟಿವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.