ADVERTISEMENT

Covid-19 India Update: ಗುಣಮುಖರಾಗುವವರ ಪ್ರಮಾಣ ಶೇ 95

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಡಿಸೆಂಬರ್ 2020, 15:04 IST
Last Updated 17 ಡಿಸೆಂಬರ್ 2020, 15:04 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ದೇಶದಲ್ಲಿ ಕೋವಿಡ್‌ನಿಂದ ಗುಣಮುಖರಾಗುವವರ ಪ್ರಮಾಣ ಶೇ 95 ರಷ್ಟು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರತಿಳಿಸಿದೆ.

ಗುಣಮುಖರಾಗುವ ಜಾಗತಿಕ ಪ್ರಮಾಣ ಶೇ 70.71 ಆದರೆ ಭಾರತದಲ್ಲಿ ಈ ಪ್ರಮಾಣ ಶೇ 95.31 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಹಾಗೇ ಕೋವಿಡ್‌ನಿಂದ ಮೃತಪಡುವವರ ಸಂಖ್ಯೆ ಕೂಡ ಗಣನೀಯವಾಗಿ ಕುಸಿದಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ ಈ ಮೂರು ರಾಜ್ಯಗಳಲ್ಲೂ ಸಾವಿನ ಪ್ರಮಾಣ ಹೆಚ್ಚಿದೆ. ಗುರುವಾರ ಒಂದೇ ದಿನ ಮಹಾರಾಷ್ಟ್ರದಲ್ಲಿ 97, ಪಶ್ಚಿಮ ಬಂಗಾಳದಲ್ಲಿ 46 ಹಾಗೂ ದೆಹಲಿಯಲ್ಲಿ 36 ಜನ ಮೃತಪಟ್ಟಿದ್ದಾರೆ.

ADVERTISEMENT

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 24,010 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 355 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಬೆಳಕಿಗೆ ಬಂದಿರುವ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 99,56,558ಕ್ಕೆ ತಲುಪಿದ್ದು, ಈ ವರೆಗೆ 1,44,451 ಮಂದಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ಇದುವರೆಗೆ ದೇಶದಲ್ಲಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 94,89,740ಕ್ಕೆ ತಲುಪಿದ್ದು, ಒಟ್ಟು 3,22,366 ಪ್ರಕರಣಗಳು ಸಕ್ರಿಯವಾಗಿವೆ.

ಒಂದೇ ದಿನದಲ್ಲಿ 33,291 ಮಂದಿ ಕೋವಿಡ್‌ನಿಂದ ಗುಣಮಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.