ADVERTISEMENT

Covid-19 India Update: ಮುಂಬೈನಲ್ಲಿ ಮೇ ನಂತರ ಅತಿ ಕಡಿಮೆ 409 ಪ್ರಕರಣಗಳು

ಏಜೆನ್ಸೀಸ್
Published 16 ನವೆಂಬರ್ 2020, 17:25 IST
Last Updated 16 ನವೆಂಬರ್ 2020, 17:25 IST
ಕೋವಿಡ್‌ ಹಿನ್ನೆಲೆಯಲ್ಲಿ ಮುಂಬೈನ ಧಾರ್ಮಿಕ ಕೇಂದ್ರವೊಂದರಲ್ಲಿ ಸ್ಯಾನಿಟೈಸ್‌ ಮಾಡುತ್ತಿರುವ ದೃಶ್ಯ
ಕೋವಿಡ್‌ ಹಿನ್ನೆಲೆಯಲ್ಲಿ ಮುಂಬೈನ ಧಾರ್ಮಿಕ ಕೇಂದ್ರವೊಂದರಲ್ಲಿ ಸ್ಯಾನಿಟೈಸ್‌ ಮಾಡುತ್ತಿರುವ ದೃಶ್ಯ   

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಕೋವಿಡ್‌–19 ದೃಢಪಟ್ಟ 2,535 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 3,001 ಮಂದಿ ಗುಣಮುಖರಾಗಿದ್ದಾರೆ ಹಾಗೂ 60 ಮಂದಿ ಸಾವಿಗೀಡಾಗಿದ್ದಾರೆ.

ಮೇ ಬಳಿಕ ಇದೇ ಮೊದಲ ಬಾರಿಗೆ ಮುಂಬೈನಲ್ಲಿ ಅತಿ ಕಡಿಮೆ 409 ಹೊಸ ಪ್ರಕರಣಗಳು ದಾಖಲಾಗಿವೆ. ಪಶ್ಚಿಮ ಬಂಗಾಳದಲ್ಲಿ 3,012 ಹೊಸ ಪ್ರಕರಣಗಳು ದಾಖಲಾಗಿದ್ದು, 53 ಮಂದಿ ಸಾವಿಗೀಡಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 7,714 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು ಕೊರೊನಾ ವೈರಸ್‌ ಸೋಂಕು ಪ್ರಕರಣಗಳ ಸಂಖ್ಯೆ 4,34,563 ತಲುಪಿದೆ.

ರಾಜಸ್ಥಾನದಲ್ಲಿ 2,169 ಕೊರೊನಾ ವೈರಸ್‌ ಪ್ರಕರಣಗಳು, ಹರಿಯಾಣದಲ್ಲಿ 2,153 ಪ್ರಕರಣಗಳು ಹಾಗೂ ತಮಿಳುನಾಡಿನಲ್ಲಿ 1,725 ಹೊಸ ಪ್ರಕರಣಗಳು ದಾಖಲಾಗಿವೆ.

ADVERTISEMENT

ಸೋಮವಾರ ಬೆಳಗಿನವರೆಗೂ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 30,548 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 435 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈ ವರೆಗೆ ಒಟ್ಟು 88,45,127 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,30,070 ಮಂದಿ ಸಾವಿಗೀಡಾಗಿದ್ದಾರೆ.

82,49,579 ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಕಳೆದ 24 ಗಂಟೆಗಳಲ್ಲಿ 13,738 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ.

ಆರೋಗ್ಯ ಸಚಿವಾಲಯದ ಇಂದಿನ ಮಾಹಿತಿ ಪ್ರಕಾರ, ದೇಶದಲ್ಲಿ ಒಟ್ಟು 4,65,478 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.