ADVERTISEMENT

Covid-19 India update: 8,309 ಕೋವಿಡ್ ಪ್ರಕರಣ ದೃಢ, 236 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ನವೆಂಬರ್ 2021, 6:11 IST
Last Updated 29 ನವೆಂಬರ್ 2021, 6:11 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 8,309 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 236 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಒಂದೇ ದಿನ 9,905 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈ ವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡವರ ಸಂಖ್ಯೆ 3,40,08,183ಕ್ಕೆ ತಲುಪಿದೆ.

ಈ ವರೆಗೆ 34,580,832 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು,4,68,790 ಮಂದಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ADVERTISEMENT

ದೇಶದಲ್ಲಿ ಸದ್ಯ ಒಟ್ಟು 1,03,859 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.