ADVERTISEMENT

ಕೋವಿಡ್ ಲಸಿಕೆ: 3 ಕೋಟಿಗೂ ಅಧಿಕ ಡೋಸ್‌ ನೀಡಿದ ಮೊದಲ ರಾಜ್ಯ ಮಹಾರಾಷ್ಟ್ರ

ಡೆಕ್ಕನ್ ಹೆರಾಲ್ಡ್
Published 25 ಜೂನ್ 2021, 12:27 IST
Last Updated 25 ಜೂನ್ 2021, 12:27 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರವು ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್‌ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ಒತ್ತು ನೀಡಿದೆ. ಆ ಮೂಲಕ ಮೂರು ಕೋಟಿಗೂ ಅಧಿಕ ಡೋಸ್‌ಗಳನ್ನು ನೀಡಿದ ಮೊದಲ ರಾಜ್ಯವೆಂಬ ಹೆಗ್ಗಳಿಕೆಗೆ ಮಹಾರಾಷ್ಟ್ರವು ಪಾತ್ರವಾಗಿದೆ.

'ಇಂದು (ಜೂನ್‌ 25) ಮಧ್ಯಾಹ್ನ 2 ಗಂಟೆಯವರೆಗೆ 3,00,27,217 ವ್ಯಾಕ್ಸಿನ್‌ ಡೋಸ್‌ಗಳನ್ನು ಮಹಾರಾಷ್ಟ್ರದಲ್ಲಿ ನೀಡಲಾಗಿದೆ' ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ) ಡಾ.ಪ್ರದೀಪ್ ವ್ಯಾಸ್ ಮಾಹಿತಿ ನೀಡಿದ್ದಾರೆ.

ಕೋವಿಡ್‌-19 ಮೂರನೇ ಅಲೆಯ ಭೀತಿ ಇರುವುದರಿಂದ ಎಲ್ಲ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಆರೋಗ್ಯ ಇಲಾಖೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಸೂಚಿಸಿದ್ದಾರೆ.

ADVERTISEMENT

ರಾಯಗಡ, ರತ್ನಗಿರಿ, ಸಿಂಧೂದುರ್ಗ, ಸತಾರ, ಸಾಂಗ್ಲಿ, ಕೊಲ್ಹಾಪುರ ಮತ್ತು ಹಿಂಗೋಲಿ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಿದ್ದಾರೆ.

ಲಸಿಕೆ ಹಾಕಿಸಿಕೊಳ್ಳಲು ಜನರು ಹಾಜರಾಗುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಉದ್ದವ್‌ ಠಾಕ್ರೆ ತಿಳಿಸಿದ್ದಾರೆ.

ಭಾರತದಲ್ಲಿ ಈವರೆಗೆ 40 ಡೆಲ್ಟಾ ಪ್ಲಸ್‌ ಪ್ರಕರಣಗಳು ಪತ್ತೆಯಾಗಿದ್ದು, ಹೆಚ್ಚು ಪ್ರಕರಣಗಳು ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ ಮತ್ತು ತಮಿಳುನಾಡಿನಲ್ಲಿ ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.