ADVERTISEMENT

ಕೊರೊನಾ ಹಾವಳಿಗೆ ಬೆಚ್ಚಿಬಿದ್ದ ಮಹಾರಾಷ್ಟ್ರ: ಒಂದೇ ದಿನದಲ್ಲಿ 25 ಸೋಂಕಿತರ ಸಾವು

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2020, 16:28 IST
Last Updated 9 ಏಪ್ರಿಲ್ 2020, 16:28 IST
   

ಮುಂಬೈ:ಮಹಾರಾಷ್ಟ್ರದಲ್ಲಿ ಒಂದೇ ದಿನ 25 ಕೊರೊನಾ ವೈರಸ್‌ ಸೋಂಕಿತರು ಮೃತಪಟ್ಟಿದ್ದಾರೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್‌ ಸೋಂಕಿನಿಂದ ಮೃತರಾದವರ ಸಂಖ್ಯೆ 97ಕ್ಕೆ ತಲುಪಿದೆ.

ಕೊರೊನಾ ಸೋಂಕು ಸಂಬಂಧಿತ ಹೆಚ್ಚಿನ ಸಾವುಗಳು ಮುಂಬೈ-ಪುಣೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸಂಭವಿಸಿವೆ.

ಮಹಾರಾಷ್ಟ್ರದಲ್ಲಿ ಗುರುವಾರ 229 ಹೊಸ ಪ್ರಕರಣಗಳು ದಾಖಲಾಗುವ ಮೂಲಕ ಕೊರೊನಾ ಸೋಂಕು ಪೀಡಿತರ ಸಂಖ್ಯೆ 1,135ಕ್ಕೆ ತಲುಪಿದೆ. ಇದರಲ್ಲಿ ಶೇ.50 ರಷ್ಟು ಪ್ರಕರಣಗಳು ಮುಂಬೈ ಮಹಾನಗರ ವ್ಯಾಪ್ತಿಯಲ್ಲಿ ಕಂಡುಬಂದಿವೆ.

ADVERTISEMENT

ಹೊಸದಾಗಿ ಮೃತಪಟ್ಟವರಲ್ಲಿ ಮುಂಬೈ ಮಹಾನಗರ ವ್ಯಾಪ್ತಿಯಲ್ಲಿ 9 ಮಂದಿ ಮತ್ತು ಪುಣೆ ಜಿಲ್ಲೆಯಲ್ಲಿ 14 ಜನರು ಸೇರಿದ್ದಾರೆ. ಸಾವಿಗೀಡಾದವರಲ್ಲಿ 12 ಮಂದಿ ಹಿರಿಯ ನಾಗರಿಕರಾಗಿದ್ದಾರೆ.

ಮುಂಬೈ ನಗರದ ಧಾರಾವಿ ಮತ್ತು ವಾರ್ಲಿ ಪ್ರದೇಶಗಳು ಕೊರೊನಾ ವೈರಸ್‌ ಸೋಂಕಿನ ಹಾಟ್‌ಸ್ಪಾಟ್‌ಗಳಾಗಿ ಮಾರ್ಪಟ್ಟಿವೆ.

ಹದಗೆಡುತ್ತಿರುವ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಅಲ್ಲಿನ ಸರ್ಕಾರ ಕೆಲ ಪ್ರದೇಶಗಳಲ್ಲಿ ಕರ್ಪ್ಯೂ ಜಾರಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.