ADVERTISEMENT

India Covid Updates: 47 ಸೋಂಕಿತರು ಸಾವು, 20,038 ಹೊಸ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಜುಲೈ 2022, 5:42 IST
Last Updated 15 ಜುಲೈ 2022, 5:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ:ದೇಶದಲ್ಲಿ ಕೋವಿಡ್‌–19 ದೃಢಪಟ್ಟ 20,038 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆಇದುವರೆಗೆ ವರದಿಯಾದ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 4,37,10,027ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಸಚಿವಾಲಯ ಬೆಳಗ್ಗೆ 8ಕ್ಕೆ ಬಿಡುಗಡೆ ಮಾಡಿರುವ ಪ್ರಕಟಣೆ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಮೃತಪಟ್ಟ 47 ಸೋಂಕಿತರೂ ಸೇರಿದಂತೆ ಇದುವರೆಗೆ 5,25,604 ಮಂದಿ ಕೋವಿಡ್‌ನಿಂದಾಗಿ ಸಾವಿಗೀಡಾಗಿದ್ದಾರೆ.

16,994 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಈವರೆಗೆ 4,30,45,350 ಸೋಂಕಿತರು ಗುಣಮುಖರಾಗಿದ್ದಾರೆ. ಇದರಿಂದಾಗಿ ಚೇತರಿಕೆ ಪ್ರಮಾಣ ಶೇ 98.49ಕ್ಕೆ ಏರಿದೆ.

ADVERTISEMENT

ಸಕ್ರಿಯ ಪ್ರಕರಣಗಳು ಒಂದು ದಿನದ ಅಂತರದಲ್ಲಿ2,997 ರಷ್ಟು ಹೆಚ್ಚಾಗಿವೆ. ಗುರುವಾರ 1,36,076 ಲಕ್ಷ ಇದ್ದ ಸಕ್ರಿಯ ಪ್ರಕರಣಗಳ ಸಂಖ್ಯೆ ಇಂದು1,39,073ಕ್ಕೆ ತಲುಪಿದೆ.ದೈನಂದಿನ ಸೋಂಕು ಖಚಿತ ಪ್ರಮಾಣ ಶೇ 4.44 ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.