ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ದಾಖಲಾದ ಹೊಸ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 1,26,789ಕ್ಕೆ ತಲುಪಿದೆ. ಆ ಮೂಲಕ ಭಾರತದಲ್ಲಿ ಮೂರನೇ ಸಾರಿ ಲಕ್ಷಕ್ಕೂ ಅಧಿಕ ಹೊಸ ಪ್ರಕರಣಗಳು ಬೆಳಕಿಗೆ ಬಂದಂತಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಇಲಾಖೆಯು ಕಳೆದ 24 ಗಂಟೆಗಳಲ್ಲಿ 1,26,789 ಪ್ರಕರಣಗಳು ಪತ್ತೆಯಾಗಿದ್ದು, 685 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿಸಿದೆ.
ಈ ವರೆಗೆ ದೇಶದಲ್ಲಿ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 1,29,28,574ಕ್ಕೆ ತಲುಪಿದ್ದು, ಅದರಲ್ಲಿ 1,18,51,393 ಸೋಂಕಿತರು ಗುಣಮುಖರಾಗಿದ್ದಾರೆ.
ಈಗ 9,10,319 ಪ್ರಕರಣಗಳು ಸಕ್ರಿಯವಾಗಿದ್ದು, ಇಲ್ಲಿಯವರೆಗೆ 1,66,862 ಮಂದಿ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಈ ವರೆಗೆ ಒಟ್ಟಾರೆ 9,01,98,673 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.