ADVERTISEMENT

Covid-19:‌ ಲಸಿಕೆ ಅಭಿಯಾನದ ಮುನ್ನಾದಿನ ಕೇರಳದಲ್ಲಿ 5,624 ಹೊಸ ಪ್ರಕರಣಗಳು

ಏಜೆನ್ಸೀಸ್
Published 15 ಜನವರಿ 2021, 15:52 IST
Last Updated 15 ಜನವರಿ 2021, 15:52 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 3,145 ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 3,500 ಮಂದಿ ಗುಣಮುಖರಾಗಿದ್ದಾರೆ ಹಾಗೂ 45 ಮಂದಿ ಸಾವಿಗೀಡಾಗಿದ್ದಾರೆ.

ಒಟ್ಟು ಪ್ರಕರಣಗಳ ಸಂಖ್ಯೆ 19,84,768 ತಲುಪಿದ್ದು, ಈ ಪೈಕಿ 18,81,088 ಮಂದಿ ಗುಣಮುಖರಾಗಿದ್ದಾರೆ ಹಾಗೂ 50,336 ಮಂದಿ ಸಾವಿಗೀಡಾಗಿದ್ದರೆ. ಪ್ರಸ್ತುತ 52,152 ಪ್ರಕರಣಗಳು ಸಕ್ರಿಯವಾಗಿವೆ.

ಜ.16ರಂದು ದೇಶದಾದ್ಯಂತ ಕೋವಿಡ್‌ ಲಸಿಕೆ ಅಭಿಯಾನ ಆರಂಭವಾಗಲಿದೆ.

ADVERTISEMENT

'ಕೋವಿಡ್‌ ಲಸಿಕೆ ನೀಡಿಕೆ ಕಾರ್ಯಕ್ರಮವನ್ನು ಇದೇ 16ರಂದು ಮೋದಿ ಅವರು ಉದ್ಘಾಟಿಸಲಿದ್ದಾರೆ. ಇದು ವಿಶ್ವದ ಅತಿದೊಡ್ಡ ಲಸಿಕಾ ಅಭಿಯಾನವಾಗಲಿದೆ. ದೇಶದಲ್ಲಿ ಒಟ್ಟು 2,934 ಕೇಂದ್ರಗಳನ್ನು ತೆರೆಯಲಾಗಿದ್ದು, ಇವುಗಳಲ್ಲಿ ಮೊದಲ ದಿನ ಸುಮಾರು 3 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಯ ಡೋಸ್‌ ನೀಡಲಾಗುತ್ತದೆ. ಒಂದು ಕೇಂದ್ರದಲ್ಲಿ ಗರಿಷ್ಠ 100 ಮಂದಿಗೆ ಲಸಿಕೆ ಚುಚ್ಚಲಾಗುತ್ತದೆ' ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೇರಳದಲ್ಲಿ 5,624 ಪ್ರಕರಣಗಳು ದಾಖಲಾಗಿದ್ದು, 4,603 ಮಂದಿ ಗುಣಮುಖರಾಗಿದ್ದಾರೆ ಹಾಗೂ 23 ಮಂದಿ ಸಾವಿಗೀಡಾಗಿದ್ದಾರೆ. 67,496 ಸಕ್ರಿಯ ಪ್ರಕರಣಗಳಿವೆ. ದೆಹಲಿಯಲ್ಲಿ 295 ಪ್ರಕರಣಗಳು ಹಾಗೂ ಆಂಧ್ರ ಪ್ರದೇಶದಲ್ಲಿ 94 ಪ್ರಕರಣಗಳು ವರದಿಯಾಗಿವೆ.

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 15,590 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 191 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈ ವರೆಗೆ ಒಟ್ಟು 1,05,27,683 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,51,918 ಮಂದಿ ಸಾವಿಗೀಡಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 15,975 ಸೋಂಕಿತರು ಚೇತರಿಸಿಕೊಂಡಿದ್ದು, ಈ ವರೆಗೆ ಗುಣಮುಖರಾದವರ ಸಂಖ್ಯೆ 1,01,62,738ಕ್ಕೆ ತಲುಪಿದೆ. 2,13,027 ಸಕ್ರಿಯ ಪ್ರಕರಣಗಳಿವೆ.

ಈಗಾಗಲೇ ನೋಂದಣಿ ಮಾಡಿಕೊಂಡಿರುವ ವೈದ್ಯರು, ಶುಶ್ರೂಷಕಿಯರು, ಸಫಾಯಿ ಕರ್ಮಚಾರಿಗಳು ಹಾಗೂ ಆಂಬುಲೆನ್ಸ್‌ ಚಾಲಕರು ಮೊದಲ ದಿನ ಲಸಿಕೆಗೆ ಒಳಪಡಲಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ಸಾರ್ವಜನಿಕ ಆರೋಗ್ಯ ತಜ್ಞರ ಪ್ರಕಾರ, 'ಯಾವ ವರ್ಗದ ಕಾರ್ಮಿಕರಿಗೆ ಯಾವ ಲಸಿಕೆ ಬಳಸಬೇಕೆಂದು ರಾಜ್ಯಗಳಿಗೆ ನಿರ್ದಿಷ್ಟ ಸೂಚನೆಗಳನ್ನು ನೀಡಿಲ್ಲ'

ಕೋವಿಶೀಲ್ಡ್‌ ಹಾಗೂ ಕೋವ್ಯಾಕ್ಸಿನ್‌ ಲಸಿಕೆಯ ಒಟ್ಟು 1.65 ಕೋಟಿ ಡೋಸ್‌ಗಳನ್ನು ಈಗಾಗಲೇ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ವಿತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.