ADVERTISEMENT

ದೇಶದಾದ್ಯಂತ ಈವರೆಗೆ 78 ಕೋಟಿಗೂ ಹೆಚ್ಚು ಡೋಸ್‌ ಲಸಿಕೆ ಪೂರೈಕೆ: ಕೇಂದ್ರ

ಪಿಟಿಐ
Published 19 ಸೆಪ್ಟೆಂಬರ್ 2021, 7:46 IST
Last Updated 19 ಸೆಪ್ಟೆಂಬರ್ 2021, 7:46 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೆ ಕೋವಿಡ್‌ ಲಸಿಕೆಯ 78.58 ಕೋಟಿ ಡೋಸ್‌ಗಳನ್ನು ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಲಸಿಕೆಯ 1.16 ಕೋಟಿಗೂ ಹೆಚ್ಚು ಡೋಸ್‌ಗಳನ್ನು ಶೀಘ್ರವೇ ಪೂರೈಸಲಾಗುತ್ತದೆ. ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಬಳಿ 5.16 ಕೋಟಿಗೂ ಅಧಿಕ ಡೋಸ್‌ಗಳಷ್ಟು ಲಸಿಕೆ ಬಳಕೆಗೆ ಲಭ್ಯವಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಲಸಿಕೆಯ ಹೆಚ್ಚು ಡೋಸ್‌ಗಳನ್ನು ಪೂರೈಸಲು ಕ್ರಮ ಕೈಗೊಂಡಿರುವ ಕಾರಣ, ಲಸಿಕಾ ಕಾರ್ಯಕ್ರಮಕ್ಕೆ ವೇಗ ಸಿಕ್ಕಿದೆ ಎಂದೂ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.