ADVERTISEMENT

ರಾಜ್ಯಗಳ ಬಳಿ 84 ಲಕ್ಷ ಡೋಸ್‌ ಕೋವಿಡ್‌ ಲಸಿಕೆ: ಕೇಂದ್ರ ಸರ್ಕಾರ

ದೇಶದಾದ್ಯಂತ ಈವರೆಗೆ 17.49 ಕೋಟಿ ಡೋಸ್‌ಗಳಷ್ಟು ಲಸಿಕೆ ಪೂರೈಕೆ ಮಾಡಲಾಗಿದೆ

ಪಿಟಿಐ
Published 8 ಮೇ 2021, 10:46 IST
Last Updated 8 ಮೇ 2021, 10:46 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿಯಲ್ಲಿ 84 ಲಕ್ಷ ಡೋಸ್‌ಗಳಿಗೂ ಹೆಚ್ಚು ಕೋವಿಡ್‌ 19 ಲಸಿಕೆಯಿದೆ. ಮುಂದಿನ ಮೂರು ದಿನಗಳಲ್ಲಿ ಇನ್ನೂ 53 ಲಕ್ಷ ಡೋಸ್‌ ಲಸಿಕೆಯನ್ನು ಪೂರೈಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ.

ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ‘ಇಲ್ಲಿವರೆಗೂ 17.49 ಕೋಟಿ ಡೋಸ್‌ಗಳಷ್ಟು ಲಸಿಕೆಯನ್ನು ದೇಶದ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಸಲಾಗಿದೆ. ಅದರಲ್ಲಿ ಸುಮಾರು 16.7 ಕೋಟಿ ಡೋಸ್‌ಗಳಷ್ಟು ಲಸಿಕೆಯನ್ನು ಬಳಕೆ ಮಾಡಲಾಗಿದೆ‘ ಎಂದು ಹೇಳಿದೆ.

‘ಪೂರೈಸಿದ ಲಸಿಕೆಯಲ್ಲಿ, ವ್ಯರ್ಥವಾಗಿರುವುದೂ ಸೇರಿದಂತೆ ಒಟ್ಟು 16,65,49,583 ಡೋಸ್‌ ಲಸಿಕೆಗಳು (ಶನಿವಾರ ಬೆಳಿಗ್ಗೆ 8 ಗಂಟೆಗೆ ಲಭ್ಯವಿರುವ ಮಾಹಿತಿಯ ಪ್ರಕಾರ) ಬಳಕೆ ಮಾಡಲಾಗಿದೆ. ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 84,08,187 ಡೋಸ್‌ಗಳಷ್ಟು ಲಸಿಕೆ ಲಭ್ಯವಿದೆ‘ ಎಂದು ಸಚಿವಾಲಯ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.