ನವದೆಹಲಿ: ಕೊರೊನಾ ಆತಂಕ ಮತ್ತೆ ಶುರುವಾಗಿದ್ದು, ರಾಜಧಾನಿ ದೆಹಲಿಯಲ್ಲಿ 104 ಸಕ್ರಿಯ ಪ್ರಕರಣಗಳು ವರದಿಯಾಗಿವೆ ಎಂದು ಅಧಿಕೃತ ಅಂಕಿ ಅಂಶಗಳಿಂದ ತಿಳಿದುಬಂದಿದೆ.
ಕಳೆದ ವಾರ 24 ಸೋಂಕಿತರು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಕಳೆದ ವಾರ 99ರಲ್ಲಿದ್ದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಈಗ 104ಕ್ಕೆ ಏರಿದೆ ಎಂದು ವರದಿ ತಿಳಿಸಿದೆ.
ದೆಹಲಿ ಸರ್ಕಾರದ ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ಅಂಕಿಅಂಶಗಳನ್ನು ದೃಢಪಡಿಸಿದರು, ಪರಿಸ್ಥಿತಿ ನಿಯಂತ್ರಣದಲ್ಲಿದ್ದಾಗ, ಅಧಿಕಾರಿಗಳು ಯಾವುದೇ ಸಂಭಾವ್ಯ ಉಲ್ಬಣವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಹೇಳಿದರು.
ಇತ್ತೀಚಿನ ವಾರಗಳಲ್ಲಿ ದೆಹಲಿಯಲ್ಲಿ ಯಾವುದೇ ಕೋವಿಡ್ ಸಂಬಂಧಿತ ಸಾವು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿ ಸರ್ಕಾರವು ಶುಕ್ರವಾರ ಆಸ್ಪತ್ರೆಗಳಲ್ಲಿ ಬೆಡ್‌ಗಳ ಲಭ್ಯತೆ, ಆಮ್ಲಜನಕ, ಅಗತ್ಯ ಔಷಧಗಳು ಮತ್ತು ವೆಂಟಿಲೇಟರ್‌ಗಳು ಹಾಗೂ ಬೈಪ್ಯಾಪ್ ಯಂತ್ರಗಳಂತಹ ಉಪಕರಣಗಳ ಲಭ್ಯತೆ ಸೇರಿದಂತೆ ಸಿದ್ಧತೆಯನ್ನು ಖಚಿತಪಡಿಸಿಕೊಳ್ಳುವಂತೆ ನಿರ್ದೇಶನ ನೀಡಿ ಸಲಹೆ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.