ADVERTISEMENT

ಕೋವಿಡ್‌ ಮಾರ್ಗಸೂಚಿ ಪಾಲನೆ ಕಡ್ಡಾಯ: ಚುನಾವಣಾ ಆಯೋಗ

ಪಿಟಿಐ
Published 10 ಏಪ್ರಿಲ್ 2021, 21:33 IST
Last Updated 10 ಏಪ್ರಿಲ್ 2021, 21:33 IST
ಚುನಾವಣಾ ಆಯೋಗ
ಚುನಾವಣಾ ಆಯೋಗ   

ನವದೆಹಲಿ: ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿದ್ದರೂ ರಾಜಕೀಯ ಪಕ್ಷಗಳ ತಾರಾ ಪ್ರಚಾರಕರು ಮತ್ತು ಹಿರಿಯ ಮುಖಂಡರು ಮಾಸ್ಕ್‌ ಧರಿಸದೆ ಚುನಾವಣಾ ಪ್ರಚಾರ ನಡೆಸುತ್ತಿರುವುದನ್ನು ಚುನಾವಣಾ ಆಯೋಗವು ಗಂಭೀರವಾಗಿ ಪರಿಗಣಿಸಿದೆ.

ಕೋವಿಡ್‌ ತಡೆ ಮಾರ್ಗಸೂಚಿ ಪಾಲನೆ ಆಗದೇ ಇದ್ದರೆ ಪ್ರಚಾರ ಸಭೆಗಳನ್ನು ರದ್ದುಪಡಿಸಲು ಹಿಂಜರಿಯುವು
ದಿಲ್ಲ ಎಂದು ಆಯೋಗವು ಎಚ್ಚರಿಕೆ ನೀಡಿದೆ.

ಮಾನ್ಯತೆ ಇರುವ ಎಲ್ಲ ರಾಜಕೀಯ ಪಕ್ಷಗಳಿಗೆ ಪತ್ರ ಬರೆದು ಆಯೋಗವು ಈ ಎಚ್ಚರಿಕೆ ನೀಡಿದೆ. ವೇದಿಕೆಯಿಂದ ಭಾಷಣ ಮಾಡುವಾಗ ಅಥವಾ ಬೇರೆ ರೀತಿಯ ಪ್ರಚಾರ ಸಂದರ್ಭದಲ್ಲಿ ಮಾಸ್ಕ್‌ ಧರಿಸಬೇಕು, ಅಂತರ ಕಾಯ್ದುಕೊಳ್ಳಬೇಕು ಎಂದು ಪತ್ರದಲ್ಲಿ ಹೇಳಲಾಗಿದೆ.

ADVERTISEMENT

ಪ್ರಚಾರ ಸಭೆಗಳಲ್ಲಿ ಮಾಸ್ಕ್‌ ಧರಿಸುವ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್‌ ಗುರುವಾರ ನೋಟಿಸ್‌ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.