ADVERTISEMENT

Covid India Update | ಹೊಸದಾಗಿ 7,633 ಜನರಿಗೆ ಸೋಂಕು, 61,233 ಸಕ್ರಿಯ ಪ್ರಕರಣ

ಪಿಟಿಐ
Published 18 ಏಪ್ರಿಲ್ 2023, 5:07 IST
Last Updated 18 ಏಪ್ರಿಲ್ 2023, 5:07 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಹೊಸದಾಗಿ ವರದಿಯಾಗಿರುವ 7,633 ಕೋವಿಡ್‌ ಪ್ರಕರಣಗಳೂ ಸೇರಿದಂತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 61,233ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಬೆಳಗ್ಗೆ 8ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 11 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 5,31,152ಕ್ಕೆ ತಲುಪಿದೆ.

ದೆಹಲಿಯಲ್ಲಿ ಐದು ಮಂದಿ ಮೃತಪಟ್ಟಿದ್ದರೆ, ನಾಲ್ವರು ಕೇರಳದಲ್ಲಿ ಸಾವಿಗೀಡಾಗಿದ್ದಾರೆ. ಹರಿಯಾಣ, ಕರ್ನಾಟಕ ಮತ್ತು ಪಂಜಾಬ್‌ನಲ್ಲಿ ತಲಾ ಒಂದೊಂದು ಸಾವಿನ ಪ್ರಕರಣಗಳು ವರದಿಯಾಗಿವೆ.

ADVERTISEMENT

ದೇಶದಲ್ಲಿ ಈವರೆಗೆ ಒಟ್ಟು 4,48,34,859 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಈ ಪೈಕಿ ಶೇ 98.68 ರಷ್ಟು ಅಂದರೆ 4,42,42,474 ಮಂದಿ ಚೇತರಿಸಿಕೊಂಡಿದ್ದಾರೆ. ಸಾವಿನ ದರ ಶೇ 1.18 ರಷ್ಟಿದ್ದರೆ, ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.14ರಷ್ಟಿದೆ.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಈವರೆಗೆ 220.66 ಕೋಟಿ ಡೋಸ್‌ ಲಸಿಕೆ ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.