ADVERTISEMENT

Covid India Update| ದೇಶದಲ್ಲಿ ಇಂದು 3,947 ಪ್ರಕರಣಗಳು ಪತ್ತೆ: 9 ಸಾವು  

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಸೆಪ್ಟೆಂಬರ್ 2022, 4:38 IST
Last Updated 30 ಸೆಪ್ಟೆಂಬರ್ 2022, 4:38 IST
ಕೋವಿಡ್‌ ಪತ್ತೆ ಪರೀಕ್ಷೆಯ ಸಾಂದರ್ಭಿಕ ಚಿತ್ರ
ಕೋವಿಡ್‌ ಪತ್ತೆ ಪರೀಕ್ಷೆಯ ಸಾಂದರ್ಭಿಕ ಚಿತ್ರ    

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತ 3,947 ಹೊಸ ಕೋವಿಡ್‌ ಪ್ರಕರಣಗಳನ್ನು ಕಂಡಿದೆ. ಇದರೊಂದಿಗೆ ದೇಶದ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 4,45,87,307 ಕ್ಕೆ ತಲುಪಿದೆ. ಸದ್ಯ ದೇಶದಲ್ಲಿ 39,583 ಸಕ್ರಿಯ ಪ್ರಕರಣಗಳಿವೆ.

ಒಂದು ದಿನದ ಈ ಅವಧಿಯಲ್ಲಿ 18 ಮಂದಿ ಕೋವಿಡ್‌ ಕಾರಣದಿಂದ ಮೃತಪಟ್ಟಿದ್ದಾರೆ. ಈ ಪೈಕಿ 9 ಸಾವುಗಳು ಕೇರಳದಿಂದಲೇ ವರದಿಯಾಗಿವೆ. ಇದರೊಂದಿಗೆ ಸಾವಿನ ಸಂಖ್ಯೆ 5,28,629 ಕ್ಕೆ ತಲುಪಿದೆ.

ಸದ್ಯ ದೇಶದ ದೈನಂದಿನ ಪಾಸಿಟಿವಿಟಿ ದರವು ಶೇಕಡ 1.23 ರಷ್ಟಿದೆ.

ADVERTISEMENT

ದೇಶದಲ್ಲಿ ಈವರೆಗೆ ನಡೆದ ಕೋವಿಡ್‌ ಲಸಿಕೆ ಅಭಿಯಾನದಲ್ಲಿ ಒಟ್ಟು 218.52 ಕೋಟಿ ಡೋಸ್‌ಗಳನ್ನು ನೀಡಲಾಗಿದೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.