ADVERTISEMENT

Covid India Update: ದೇಶದಲ್ಲಿ ಸಕ್ರಿಯ ಪ್ರಕರಣಗಳು ಇಳಿಮುಖ

ಪಿಟಿಐ
Published 11 ನವೆಂಬರ್ 2021, 5:49 IST
Last Updated 11 ನವೆಂಬರ್ 2021, 5:49 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ದೇಶದಾದ್ಯಂತ ಹೊಸದಾಗಿ 13,091 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,44,01,670ಕ್ಕೆ ಏರಿದೆ.

ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,38,556ಕ್ಕೆ ಇಳಿದಿದೆ. ಇದು ಕಳೆದ 266 ದಿನಗಳಲ್ಲೇ ಅತಿ ಕಡಿಮೆ ಸಂಖ್ಯೆಯಲ್ಲಿ ವರದಿಯಾಗಿರುವ ಸಕ್ರಿಯ ಪ್ರಕರಣಗಳಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬೆಳಿಗ್ಗೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಬುಧವಾರ ಕೋವಿಡ್‌ನಿಂದಾಗಿ ಮೃತಪಟ್ಟರ ಸಂಖ್ಯೆ 340. ಹೀಗಾಗಿ ಇದುವರೆಗೆ ಸತ್ತವರ ಒಟ್ಟು ಸಂಖ್ಯೆ 4,62,189ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.40ರಷ್ಟಿದ್ದರೆ, ಗುಣಮುಖರಾದವರ ಪ್ರಮಾಣ ಶೇ 98.25ರಷ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.