ADVERTISEMENT

Covid India Update: 50,407 ಹೊಸ ಪ್ರಕರಣ, 804 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಫೆಬ್ರುವರಿ 2022, 4:55 IST
Last Updated 12 ಫೆಬ್ರುವರಿ 2022, 4:55 IST
   

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 50,407 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 804 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,10,443ಕ್ಕೆ ಏರಿದ್ದು, ಒಟ್ಟು ಪ್ರಕರಣಗಳ ಪೈಕಿ ಶೇಕಡ 1.43ರಷ್ಟು ಸಕ್ರಿಯ ಪ್ರಕರಣಗಳಿವೆ.

ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇಕಡ 3.48ರಷ್ಟಿದೆ.

ADVERTISEMENT

ದೇಶದಲ್ಲಿ ಈವರೆಗೆ 172 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.