ADVERTISEMENT

Covid India Update: 24 ಗಂಟೆಗಳಲ್ಲಿ 3,011 ಹೊಸ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಅಕ್ಟೋಬರ್ 2022, 5:25 IST
Last Updated 3 ಅಕ್ಟೋಬರ್ 2022, 5:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,011 ಹೊಸ ಕೋವಿಡ್‌ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 28 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 36,126ಕ್ಕೆ ಇಳಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ದರ ಶೇ 2.23ರಷ್ಟಿದೆ.

ಹೊಸ ಪ್ರಕರಣಗಳೂ ಸೇರಿ ಒಟ್ಟು ಸೋಂಕಿತರ ಸಂಖ್ಯೆ 4,45,97,498ಕ್ಕೆ ಏರಿಕೆಯಾಗಿ, ಮೃತಪಟ್ಟವರ ಸಂಖ್ಯೆ 5,28,701ಕ್ಕೆ ಹೆಚ್ಚಿದೆ. ಒಟ್ಟು ಸೋಂಕಿತರ ಪೈಕಿ 4,40,32,671 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.