ADVERTISEMENT

Covid-19 India Update: ದೇಶದಲ್ಲಿ 75.97 ಲಕ್ಷಕ್ಕೂ ಹೆಚ್ಚು ಸೋಂಕಿತರು ಗುಣಮುಖ

ಏಜೆನ್ಸೀಸ್
Published 2 ನವೆಂಬರ್ 2020, 16:56 IST
Last Updated 2 ನವೆಂಬರ್ 2020, 16:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ಕೋವಿಡ್‌–19ನಿಂದ 7,108 ಮಂದಿ ಗುಣಮುಖರಾಗಿದ್ದಾರೆ ಹಾಗೂ ಕೋವಿಡ್‌–19 ದೃಢಪಟ್ಟ 4,138 ಹೊಸ ಪ್ರಕರಣಗಳು ದಾಖಲಾಗಿವೆ. ಒಟ್ಟು 4,31,329 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 3.55 ಲಕ್ಷ ಮಂದಿ ಗುಣಮುಖರಾಗಿದ್ದಾರೆ.

ಸೋಮವಾರ ರಾತ್ರಿ 8ರ ವರೆಗಿನ ಮಾಹಿತಿ ಪ್ರಕಾರ, ದೇಶದಲ್ಲಿ ಒಟ್ಟು 82,63,866 ಪ್ರಕರಣಗಳಿದ್ದರೆ, 75,97,664 ಮಂದಿ ಗುಣಮುಖರಾಗಿದ್ದಾರೆ ಹಾಗೂ 1,23,022 ಮಂದಿ ಸಾವಿಗೀಡಾಗಿದ್ದಾರೆ.

ಮಹಾರಾಷ್ಟ್ರದಲ್ಲಿ 4,009 ಹೊಸ ಪ್ರಕರಣಗಳು ದಾಖಲಾಗುವ ಮೂಲಕ ಒಟ್ಟು ಕೋವಿಡ್‌–19 ಪ್ರಕರಣಗಳ ಸಂಖ್ಯೆ 16,87,784 ಮುಟ್ಟಿದೆ ಹಾಗೂ ಇದೇ ಅವಧಿಯಲ್ಲಿ 10,225 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 1,18,777 ಸಕ್ರಿಯ ಪ್ರಕರಣಗಳಿವೆ. ಕರ್ನಾಟಕದಲ್ಲಿ ಒಟ್ಟು ಕೋವಿಡ್‌–19 ಪ್ರಕರಣಗಳ ಸಂಖ್ಯೆ 8,29,640 ತಲುಪಿದೆ.

ADVERTISEMENT

ಪಶ್ಚಿಮ ಬಂಗಾಳದಲ್ಲಿ 4,085 ಮಂದಿ ಗುಣಮುಖರಾಗಿದ್ದು, ಈವರೆಗೂ 3,38,075 ಮಂದಿ ಚೇತರಿಸಿಕೊಂಡಿದ್ದಾರೆ. ದೆಹಲಿಯಲ್ಲಿ 4,001 ಹೊಸ ಪ್ರಕರಣಗಳು ದಾಖಲಾಗುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 3.96 ಲಕ್ಷ ದಾಟಿದೆ.

ಸೋಮವಾರ ಬೆಳಗ್ಗಿನ ವರೆಗೂ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 45,230 ಕೊರೊನಾ ಸೋಂಕು ಪ್ರಕರಣಗಳು ಬೆಳಕಿಗೆ ಬಂದಿದ್ದು, 496 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಈ ವರೆಗೆ ದೇಶದಲ್ಲಿ ಒಟ್ಟು 82,29,313 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 1,22,607 ಸೋಂಕಿತರು ಸಾವಿಗೀಡಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 53,285 ಸೋಂಕಿತರು ಚೇತರಿಸಿಕೊಂಡಿದ್ದು, ಒಟ್ಟು 75,44,798 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೋವಿಡ್‌ನಿಂದ ಚೇತರಿಸಿಕೊಂಡವರ ಪ್ರಮಾಣ ಶೇ. 91.86ಕ್ಕೆ ತಲುಪಿದ್ದು, ಶೇ. 6.83 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ. 1.49 ಇದೆ.

#CoronaVirusUpdates:

📍Total #COVID19 Cases in India (as on November 2, 2020)

▶️91.68% Cured/Discharged/Migrated (79,44,798)
▶️6.83% Active cases (5,61,908)
▶️1.49% Deaths (1,22,607)

Total COVID-19 confirmed cases = Cured/Discharged/Migrated+Active cases+Deaths pic.twitter.com/ItReQ0jm1f

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.