ADVERTISEMENT

Covid 19 India Update: ಇಂದು 4,213 ಮಂದಿಗೆ ಸೋಂಕು, 1,559 ಸೋಂಕಿತರು ಗುಣಮುಖ

ಏಜೆನ್ಸೀಸ್
Published 11 ಮೇ 2020, 14:10 IST
Last Updated 11 ಮೇ 2020, 14:10 IST
   

ನವದೆಹಲಿ: ದೇಶದಲ್ಲಿಕಳೆದ 24 ಗಂಟೆ ಅವಧಿಯಲ್ಲಿ ಬರೋಬ್ಬರಿ4,213 ಜನರಲ್ಲಿ ಕೋವಿಡ್‌–19 ಸೋಂಕು ಇರುವುದು ದೃಢಪಟ್ಟಿದೆ.ಇದು ಈವರೆಗೆ ವರದಿಯಾಗಿರುವಂತೆ ಒಂದೇ ದಿನದಲ್ಲಿ ದಾಖಲಾದ ಗರಿಷ್ಠಸೋಂಕು ಪ್ರಕರಣಗಳಾಗಿವೆ.ಮಾತ್ರವಲ್ಲದೆ ಇಂದು ಒಟ್ಟು 1,559 ಸೋಂಕಿತರು ಗುಣಮುಖರಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ ಸದ್ಯ 67,152ಕ್ಕೆ ಏರಿಕೆಯಾಗಿದೆ.ಇದರಲ್ಲಿಈ ಪೈಕಿ 20,917 ಮಂದಿ ಗುಣಮುಖರಾಗಿದ್ದಾರೆ.ಒಟ್ಟು ಸಂಖ್ಯೆ 2,206 ಜನರು ಸೋಂಕಿಗೆ ಬಲಿಯಾಗಿದ್ದಾರೆ. 44,029 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ, 22,171ಕ್ಕೆ ಏರಿದ್ದು, ಇದುವರೆಗೆ 832 ಜನರು ಮೃತಪಟ್ಟಿದ್ದಾರೆ. ಗುಜರಾತ್‌ನಲ್ಲಿ 493 ಜನರು ಬಲಿಯಾಗಿದ್ದಾರೆ.

ADVERTISEMENT

ಕರ್ನಾಟಕದಲ್ಲಿ ಇಂದು 14 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಸೋಂಕು ಏರಿಕೆಯಾಗಿದೆ. ಕಳೆದ ತಿಂಗಳು ಕೇಂದ್ರ ಸರ್ಕಾರವು ವಿವಿಧ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಹಂಚಿಕೊಂಡಿದ್ದ ವರದಿಯಲ್ಲಿ, ಮೇ 15ರ ವೇಳೆಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 65,000 ಮುಟ್ಟಬಹುದು ಎಂಬ ಅಂದಾಜು ಇತ್ತು. ಆದರೆ ಮೇ 11ಕ್ಕೇ ಇದು 65,000ದ ಗಡಿ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.