ADVERTISEMENT

Covid-19 India Update: ಮಹಾರಾಷ್ಟ್ರದಲ್ಲಿ ಒಂದೇ ದಿನ 5,760 ಹೊಸ ಪ್ರಕರಣ

ಏಜೆನ್ಸೀಸ್
Published 21 ನವೆಂಬರ್ 2020, 15:55 IST
Last Updated 21 ನವೆಂಬರ್ 2020, 15:55 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ದೇಶದಲ್ಲಿ ಹೆಚ್ಚು ಕೋವಿಡ್‌ ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಇಂದು (ಶನಿವಾರ) ಒಂದೇ ದಿನ 5,760 ಹೊಸ ಪ್ರಕರಣಗಳು ದೃಢಪಟ್ಟಿದ್ದು, 62 ಮಂದಿ ಮೃತಪಟ್ಟಿದ್ದಾರೆ.

ದೇಶದಾದ್ಯಂತ ಕೋವಿಡ್‌ ಸೋಂಕಿತರ ಸಂಖ್ಯೆ 90.65 ಲಕ್ಷ ದಾಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇಲಾಖೆಯ ಮಾಹಿತಿ ಪ್ರಕಾರ ದೇಶದಲ್ಲಿ ಇದುವರೆಗೆ 90,65,301 ಪ್ರಕರಣಗಳು ವರದಿಯಾಗಿವೆ. ಆ ಪೈಕಿ 132,872 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈವರೆಗೆ 84,91,462 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

ಕೇರಳದಲ್ಲಿ ಇಂದು ಒಂದೇ ದಿನ 5,772 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 25 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ರಾಜಸ್ಥಾನದಲ್ಲಿ 3,007, ಕರ್ನಾಟಕದಲ್ಲಿ 1,781, ಗುಜರಾತ್‌ನಲ್ಲಿ 1,515, ಮಹಾರಾಷ್ಟ್ರದಲ್ಲಿ 1,092, ಆಂಧ್ರಪ್ರದೇಶದಲ್ಲಿ 1,160, ಜಮ್ಮು–ಕಾಶ್ಮೀರದಲ್ಲಿ 608, ಉತ್ತರಾಖಂಡದಲ್ಲಿ 585 ಹೊಸ ಪ್ರಕರಣಗಳು ದೃಢಪಟ್ಟಿವೆ. ಸದ್ಯ ದೇಶದಲ್ಲಿ 4,40,967 ಸಕ್ರಿಯ ಪ್ರಕರಣಗಳು ಇವೆ.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

ನ.20 ರವರೆಗೆ ಒಟ್ಟು 13,06,57,808 ಕೊರೊನಾ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.