ನವದೆಹಲಿ: ಭಾರತದಲ್ಲಿ ಶನಿವಾರ 13,272 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,27,890ಕ್ಕೆ ಏರಿದೆ.
ಸದ್ಯ ದೇಶದಲ್ಲಿ 1,01,166 ಸಕ್ರಿಯ ಸೋಂಕು ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿ ಅಂಶಗಳಿಂದ ಗೊತ್ತಾಗಿದೆ.
ಈ ಒಂದು ದಿನದ ಅವಧಿಯಲ್ಲಿ ಒಟ್ಟು 36 ಸಾವು ಪ್ರಕರಣಗಳು ಪತ್ತೆಯಾಗಿವೆ. ಕೇರಳದಲ್ಲೇ 6 ಸಾವು ಸಂಭವಿಸಿದೆ. ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 5,27,289 ಕ್ಕೆ ಏರಿದೆ.
ದೈನಂದಿನ ಪಾಸಿಟಿವಿಟಿ ದರವು ಶೇಕಡ 4.21 ರಷ್ಟು ಇದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಈ ವರೆಗೆ ರಾಷ್ಟ್ರದಾದ್ಯಂತ ನಡೆದ ಅಭಿಯಾನದಲ್ಲಿ 209.40 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.