ADVERTISEMENT

Covid India Update: 24 ಗಂಟೆಗಳಲ್ಲಿ 10,256 ಹೊಸ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಆಗಸ್ಟ್ 2022, 5:34 IST
Last Updated 26 ಆಗಸ್ಟ್ 2022, 5:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 10,256 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 68 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 90,707ಕ್ಕೆ ಏರಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ದರ ಶೇ 2.43ಕ್ಕೆ ಹೆಚ್ಚಿದೆ.

ಹೊಸ ಪ್ರಕರಣಗಳೂ ಸೇರಿ ಒಟ್ಟು ಸೋಂಕಿತರ ಸಂಖ್ಯೆ 4,43,89,176ಕ್ಕೆ ಏರಿಕೆಯಾಗಿ, ಮೃತಪಟ್ಟವರ ಸಂಖ್ಯೆ 5,27,556ಕ್ಕೆ ಹೆಚ್ಚಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.