ADVERTISEMENT

Covid India Updates: ಏರುಗತಿಯಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆ

ಪಿಟಿಐ
Published 22 ಏಪ್ರಿಲ್ 2022, 4:41 IST
Last Updated 22 ಏಪ್ರಿಲ್ 2022, 4:41 IST
   

ನವದೆಹಲಿ: ದೇಶದಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 2,451 ಹೊಸ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಹೀಗಾಗಿ, ದೇಶದ ಒಟ್ಟು ಸೋಂಕಿತರ ಸಂಖ್ಯೆ 4,30,52,425ಕ್ಕೆ ಏರಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 14,241ಕ್ಕೆ ಏರಿಕೆಯಾಗಿದೆ.

24 ಗಂಟೆಗಳಲ್ಲಿ 54 ಸೋಂಕಿತರ ಸಾವು ಸೇರಿ ಮೃತಪಟ್ಟವರ ಒಟ್ಟು ಸಂಖ್ಯೆ 5,22,116ಕ್ಕೆ ಏರಿದೆ.

ADVERTISEMENT

ಒಟ್ಟು ಸೋಂಕಿನ ಪ್ರಕರಣಗಳ ಪೈಕಿ ಶೇಕಡ 0.03 ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.75 ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.