ADVERTISEMENT

Covid Inida Updates: ತುಸು ಏರಿಕೆಯೊಂದಿಗೆ 4,362 ಪ್ರಕರಣಗಳು ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಮಾರ್ಚ್ 2022, 4:31 IST
Last Updated 7 ಮಾರ್ಚ್ 2022, 4:31 IST
ಎಎಫ್‌ಪಿ ಚಿತ್ರ
ಎಎಫ್‌ಪಿ ಚಿತ್ರ   

ನವದೆಹಲಿ: ದೇಶದ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡುಬಂದಿದ್ದು, 24 ಗಂಟೆಗಳಲ್ಲಿ 4,362 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ 66 ಸಾವು ಸಂಭವಿಸಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,15,102ಕ್ಕೆ ಏರಿದೆ.

ದೇಶದಲ್ಲಿ ಸದ್ಯ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 54,118ರಷ್ಟಿದೆ.

ADVERTISEMENT

ಈವರೆಗೆ ದೇಶದಲ್ಲಿ 178 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.