ಕೋಲ್ಕತಾ: ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ 2021ನೇ ಸಾಲಿನ 10 ಮತ್ತು 12 ನೇ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆಗಳು ಇರುವುದಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ತಿಳಿಸಿದೆ.
ಈ ಬಗ್ಗೆ ವರದಿ ಮಾಡಿರುವ ಎಎನ್ಐ ಸುದ್ದಿಸಂಸ್ಥೆ, 'ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ 2021ನೇ ಸಾಲಿನ 10 ಮತ್ತು 12 ನೇ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆಗಳು ಇರುವುದಿಲ್ಲ. ಈ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂಬುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಹಿತಿ ನೀಡಿದ್ದಾರೆ' ಎಂದು ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.