ಹಿಸ್ಸಾರ್(ಹರಿಯಾಣ): ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಐದು ಕೋವಿಡ್ ರೋಗಿಗಳು ಸೋಮವಾರ ಮೃತಪಟ್ಟಿದ್ದಾರೆ. ಅವರ ಸಾವಿಗೆ ವೈದ್ಯಕೀಯ ಆಮ್ಲಜನಕ ಕೊರತೆಯೇ ಕಾರಣ ಎಂದು ಆರೋಪಿಸಿ, ಸಂಬಂಧಿಕರು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಮೃತಪಟ್ಟವರಲ್ಲಿ ಮೂವರು ಹಿಸ್ಸಾರ್ ಜಿಲ್ಲೆ, ಒಬ್ಬರು ದೆಹಲಿ ಹಾಗೂ ಇನ್ನೊಬ್ಬರು ಪಂಜಾಬ್‌ನ ನಿವಾಸಿಯಾಗಿದ್ದಾರೆ.
‘ಸರ್ಕಾರದ ಮಾರ್ಗಸೂಚಿಗಳಿಗನುಸಾರವಾಗಿ ಕೋವಿಡ್ ರೋಗಿಗಳ ಮೃತದೇಹಗಳನ್ನು ಆಗ್ರೋಹಾ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.
‘ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಯ ಸುತ್ತ ಪೊಲೀಸರನ್ನು ನಿಯೋಜಿಸಲಾಗಿದೆ. ಆಮ್ಲಜನಕ ಕೊರತೆಯಿಂದಾಗಿ ಕೋವಿಡ್ ರೋಗಿಗಳು ಮೃತಪಟ್ಟಿರುವುದಾಗಿ ಸಂಬಂಧಿಕರು ದೂರಿದ್ದಾರೆ. ಆದರೆ ಈ ಸಂಬಂಧ ಯಾರೊಬ್ಬರು ಅಧಿಕೃತ ದೂರು ದಾಖಲಿಸಿಲ್ಲ’ ಎಂದು ಪೊಲೀಸ್ ಅಧಿಕಾರಿ ಜಗದೀಶ್ ಅವರು ಮಾಹಿತಿ ನೀಡಿದರು.
‘ಈ ಘಟನೆ ಬಗ್ಗೆ ಮುಖ್ಯ ವೈದ್ಯಕೀಯ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ. ಅವರ ವರದಿಯ ಆಧಾರದ ಮೇಲೆ ಮುಂದಿನ ಕ್ರಮಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.
ಕಳೆದ 24 ಗಂಟೆಗಳಲ್ಲಿ ಹರಿಯಾಣದಲ್ಲಿ ಈ ರೀತಿಯ ಎರಡು ಘಟನೆಗಳು ಬೆಳಕಿಗೆ ಬಂದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.