ADVERTISEMENT

India Covid Update: ಸಕ್ರಿಯ ಪ್ರಕರಣಗಳಲ್ಲಿ ಅಲ್ಪ ಇಳಿಕೆ, ಒಂದೇ ದಿನ 53 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ನವೆಂಬರ್ 2022, 5:24 IST
Last Updated 1 ನವೆಂಬರ್ 2022, 5:24 IST
   

ನವದೆಹಲಿ:ದೇಶದಲ್ಲಿ ಕೋವಿಡ್–19 ದೃಢಪಟ್ಟ 1,046 ಹೊಸ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಅಲ್ಪ (294) ಇಳಿಕೆ ಕಂಡುಬಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಹೇಳಿದೆ.

ಸೋಮವಾರ17,912ಪ್ರಕರಣಗಳುಸಕ್ರಿಯವಾಗಿದ್ದವು. ಆ ಪ್ರಮಾಣ ಇಂದು17,618ಕ್ಕೆ ಇಳಿದಿದೆ.

ಸಚಿವಾಲಯ ಇಂದು ಬೆಳಗ್ಗೆ 8ಕ್ಕೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ದೇಶದಲ್ಲಿ ಇದುವರೆಗೆ ಪತ್ತೆಯಾಗಿರುವ ಪ್ರಕರಣಗಳ ಸಂಖ್ಯೆ4,46,54,638ಕ್ಕೆ ತಲುಪಿದೆ.ಈ ಪೈಕಿ4,41,07,943 ಸೋಂಕಿತರು ಚೇತರಿಸಿಕೊಂಡಿದ್ದಾರೆ.ಹೊಸದಾಗಿ ವರದಿಯಾಗಿರುವ53 ಸಾವು ಸೇರಿ ಒಟ್ಟು5,29,077 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ, ಸಕ್ರಿಯ ಪ್ರಕರಣಗಳ ಪ್ರಮಾಣ ಶೇ0.04 ರಷ್ಟಿದೆ. ಗುಣಮುಖರಾದವರ ಪ್ರಮಾಣ ಶೇ98.78 ರಷ್ಟು ಇದೆ. ಶೇ1.18 ರಷ್ಟು ಮಂದಿ ಸಾವಿಗೀಡಾಗಿದ್ದಾರೆ.

ಇಲಾಖೆಯ ಮಾಹಿತಿ ಪ್ರಕಾರ ಇದುವರೆಗೆ 219.64 ಕೋಟಿ ಡೋಸ್‌ ಕೋವಿಡ್ ಲಸಿಕೆ ವಿತರಿಸಲಾಗಿದೆ.

ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ 2020ರ ಆಗಸ್ಟ್‌ 7 ರಂದು 20 ಲಕ್ಷದ ಗಡಿ ದಾಟಿತ್ತು. ಅದೇ ವರ್ಷದ ಆಗಸ್ಟ್‌ 23ರಂದು 30 ಲಕ್ಷ, ಸೆಪ್ಟೆಂಬರ್‌ 5ರಂದು 40 ಲಕ್ಷ ಮತ್ತು ಸೆಪ್ಟೆಂಬರ್ 16ರಂದು 50 ಲಕ್ಷ ಪ್ರಕರಣಗಳು ವರದಿಯಾಗಿದ್ದವು. ನಂತರ ಸೆಪ್ಟೆಂಬರ್‌ 28, ಅಕ್ಟೋಬರ್‌ 11, ಅಕ್ಟೋಬರ್‌ 29 ಹಾಗೂ ನವೆಂಬರ್‌ 20ರಂದು ಕ್ರಮವಾಗಿ 60 ಲಕ್ಷ, 70 ಲಕ್ಷ, 80 ಲಕ್ಷ ಹಾಗೂ 90 ಲಕ್ಷ ಪ್ರಕರಣಗಳು ದಾಖಲಾಗಿದ್ದವು.

ಕೋವಿಡ್‌ ಪ್ರಕರಣಗಳ ಒಟ್ಟು ಸಂಖ್ಯೆ2020ರ ಡಿಸೆಂಬರ್‌ 19ರಂದು ಒಂದು ಕೋಟಿ, 2021ರ ಮೇ 4 ರಂದು ಎರಡು ಕೋಟಿ ಹಾಗೂ ಜೂನ್‌ 23ರಂದು ಮೂರು ಕೋಟಿಗಡಿ ದಾಟಿತ್ತು. ಈ ಸಂಖ್ಯೆಇದೇ ವರ್ಷ (2022) ಜನವರಿ 25ರಂದು ನಾಲ್ಕು ಕೋಟಿಗಿಂತ ಹೆಚ್ಚಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.