ADVERTISEMENT

ಶ್ರೀನಗರ: 15–18 ವಯಸ್ಸಿನ ಮಕ್ಕಳಿಗೆ ಕೋವಿಡ್‌ ಲಸಿಕೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2022, 15:33 IST
Last Updated 3 ಜನವರಿ 2022, 15:33 IST

ಶ್ರೀನಗರ: 15ರಿಂದ 18 ವಯೋಮಾನದ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ಅಭಿಯಾನಕ್ಕೆ ಜಮ್ಮು ಮತ್ತು ಕಾಶ್ಮೀರ ಆಡಳಿತವು ಸೋಮವಾರ ಚಾಲನೆ ನೀಡಿದೆ.

ಶ್ರೀನಗರದ ಕೋತಿಬಾಗ್‌ನ ಬಾಲಕಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಅಭಿಯಾನಕ್ಕೆ ಜಮ್ಮು ಮತ್ತು ಕಾಶ್ಮೀರದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ವಿವೇಕ್‌ ಭಾರಧ್ವಾಜ್‌ ಅವರು ಚಾಲನೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರಾಡಳಿತ ಪ್ರದೇಶ ವ್ಯಾಪ್ತಿಯ 20 ಜಿಲ್ಲೆಗಳ 822 ಕೇಂದ್ರಗಳಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. 8.33 ಲಕ್ಷ ಮಕ್ಕಳಿಗೆ (15ರಿಂದ 18 ವರ್ಷ) ಲಸಿಕೆ ನೀಡಲು ಉದ್ದೇಶಿಸಲಾಗಿದ್ದು, ಪ್ರತಿದಿನ ಒಂದು ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.