ADVERTISEMENT

ಏಪ್ರಿಲ್‌ ತಿಂಗಳು ಪೂರ್ತಿ ರಜೆ ಇಲ್ಲದೆ ಕೋವಿಡ್‌ ಲಸಿಕೆ ಪೂರೈಕೆ

ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆ

ಪಿಟಿಐ
Published 1 ಏಪ್ರಿಲ್ 2021, 12:25 IST
Last Updated 1 ಏಪ್ರಿಲ್ 2021, 12:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸರ್ಕಾರಿ ರಜಾ ದಿನಗಳು ಸೇರಿದಂತೆ ಏಪ್ರಿಲ್‌ ತಿಂಗಳು ಪೂರ್ತಿ ಸಾರ್ವಜನಿಕ ಮತ್ತು ಖಾಸಗಿ ಕೋವಿಡ್‌ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಿಸಬೇಕು ಮತ್ತು ಈ ಮೂಲಕ ಅತಿ ಹೆಚ್ಚು ಜನರಿಗೆ ಲಸಿಕೆ ದೊರೆಯುವಂತೆ ಮಾಡಬೇಕು ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಈ ಸಂಬಂಧ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದು,ಇಡೀ ತಿಂಗಳು ಲಸಿಕೆ ನೀಡುವುದಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದೆ.

‘ರಾಜ್ಯಗಳು ಮತ್ತು ಕೇಂದ್ರಾಳಿತ ಪ್ರದೇಶಗಳೊಂದಿಗೆ ಬುಧವಾರ ನಡೆಸಿದ ಸುದೀರ್ಘ ಚರ್ಚೆಯ ನಂತರ ಲಸಿಕೆ ಅಭಿಯಾನದಲ್ಲಿ ಸಾರ್ವಜನಿಕ ಮತ್ತು ಖಾಸಗಿ ಕೋವಿಡ್‌ ಲಸಿಕಾ ಕೇಂದ್ರಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಲು ತೀರ್ಮಾನಿಸಲಾಯಿತು. ಈ ಮೂಲಕ ಕೋವಿಡ್‌ ವಿರುದ್ಧದ ಲಸಿಕೆ ಅಭಿಯಾನದ ವೇಗವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ‘ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ADVERTISEMENT

ದೇಶದೆಲ್ಲೆಡೆ ಗುರುವಾರದಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಅಭಿಯಾನ ಆರಂಭವಾಗಿದ್ದು, ಅದನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಈ ಪ್ರಯತ್ನ ನಡೆದಿದೆ ಎಂದು ಅದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.