ADVERTISEMENT

ಕೋವಿಡ್‌ ಲಸಿಕೆ: ರಾಜ್ಯಗಳಿಗೆ 101 ಕೋಟಿ ಡೋಸ್‌ ಪೂರೈಕೆ– ಕೇಂದ್ರ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2021, 10:26 IST
Last Updated 16 ಅಕ್ಟೋಬರ್ 2021, 10:26 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಇದುವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆಕೋವಿಡ್‌ ಲಸಿಕೆಯ 101 ಕೋಟಿಗೂ ಹೆಚ್ಚು ಡೋಸ್‌ಗಳನ್ನು ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಬಾಕಿ ಮತ್ತು ಬಳಕೆಯಾಗದ ಇನ್ನೂ ಸುಮಾರು 11.12 ಕೋಟಿ ಡೋಸ್‌ಗಳು ಲಭ್ಯ ಇವೆ ಎಂದೂ ಅದು ಹೇಳಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 101 ಕೋಟಿಗೂ ಹೆಚ್ಚು (1,01,51,66,665) ಡೋಸ್‌ಗಳಷ್ಟು ಕೋವಿಡ್‌ ಲಸಿಕೆಯನ್ನು ಉಚಿತವಾಗಿ ನೀಡಲಾಗಿದೆ ಎಂದೂ ಸಚಿವಾಲಯ ತಿಳಿಸಿದೆ.ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.