ADVERTISEMENT

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 3.29 ಕೋಟಿ ಡೋಸ್‌ ಲಸಿಕೆ ಲಭ್ಯ: ಕೇಂದ್ರ

ಪಿಟಿಐ
Published 25 ಜುಲೈ 2021, 9:20 IST
Last Updated 25 ಜುಲೈ 2021, 9:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 3.29 ಕೋಟಿ ಡೋಸ್‌ ಕೋವಿಡ್‌ ಲಸಿಕೆ ಲಭ್ಯವಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಭಾನುವಾರ ತಿಳಿಸಿದೆ.

‘ಕೇಂದ್ರ ಸರ್ಕಾರವು ಈವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 45.37 ಕೋಟಿ ಡೋಸ್‌ ಲಸಿಕೆಯನ್ನು ನೀಡಿದೆ. ಮುಂಬರುವ ದಿನಗಳಲ್ಲಿ 11,79,010 ಡೋಸ್‌ಗಳನ್ನು ನೀಡಲಾಗುವುದು. ಭಾನುವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ ಪೋಲಾಗಿರುವ ಲಸಿಕೆಯೂ ಸೇರಿ ಈವರೆಗೆ ಒಟ್ಟು 42,08,32,021 ಡೋಸ್‌ ಲಸಿಕೆ ನೀಡಲಾಗಿದೆ’ ಎಂದು ಸಚಿವಾಲಯವು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT