ನವದೆಹಲಿ: ‘ಪ್ರತಿಯೊಬ್ಬರಿಗೂ ಸುರಕ್ಷಿತ ಜೀವನವನ್ನು ಅನುಭವಿಸುವ ಹಕ್ಕಿದೆ. ಹೀಗಾಗಿ ದೇಶದಲ್ಲಿ ಕೋವಿಡ್ ಲಸಿಕೆಯ ಅವಶ್ಯಕತೆಯಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಸಾಮಾಜಿಕ ಜಾಲತಾಣದಲ್ಲಿ ‘ಸ್ಪೀಕ್ ಅಪ್ ಫಾರ್ ವ್ಯಾಕ್ಸಿನ್ಸ್ ಫಾರ್ ಆಲ್’ ಎಂಬ ಅಭಿಯಾನವನ್ನು ಕಾಂಗ್ರೆಸ್ ಪ್ರಾರಂಭಿಸಿದೆ.
ಈ ಅಭಿಯಾನದ ಅಂಗವಾಗಿ ಮಾತನಾಡಿದ ಅವರು,‘ ದೇಶದ ಪ್ರತಿಯೊಬ್ಬ ಪ್ರಜೆಗೂ ಕೋವಿಡ್ ಲಸಿಕೆಯನ್ನು ನೀಡಬೇಕು. ದೇಶಕ್ಕೆ ಕೋವಿಡ್ ಲಸಿಕೆಯ ಅವಶ್ಯಕತೆಯಿದೆ. ಅದಕ್ಕಾಗಿ ನೀವೆಲ್ಲರು ಧ್ವನಿ ಎತ್ತಬೇಕು’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದರೊಂದಿಗೆ ಕೋವಿಡ್ ಲಸಿಕೆಗೆ ಸಂಬಂಧಿಸಿದ ಸಣ್ಣ ವಿಡಿಯೊವೊಂದನ್ನು ಹಂಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.