ADVERTISEMENT

ಖಾಸಗಿ ಆಸ್ಪತ್ರೆಗಳಲ್ಲಿ ₹250ಕ್ಕೆ ಕೋವಿಡ್‌ ಲಸಿಕೆ: ಆರೋಗ್ಯ ಸಚಿವಾಲಯ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2021, 14:43 IST
Last Updated 27 ಫೆಬ್ರುವರಿ 2021, 14:43 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಖಾಸಗಿ ಆಸ್ಪತ್ರೆಗಳಲ್ಲಿ ₹250ಕ್ಕೆ ಕೋವಿಡ್‌ ಲಸಿಕೆ ದೊರೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಮಾರ್ಚ್‌ 1ರಿಂದ ಕೋವಿಡ್‌ ಲಸಿಕೆ ದೊರೆಯಲಿದೆ. ಒಂದು ಡೋಸೆಜ್‌ಗೆ ₹ 250 ನಿಗದಿಪಡಿಸಲಾಗಿದೆ.ಈ ಮೊತ್ತದಲ್ಲಿ ಸೇವಾ ಶುಲ್ಕ ಕೂಡ ಸೇರಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಸರ್ಕಾರಿ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಕೋವಿಡ್‌ ಲಸಿಕೆ ಉಚಿತವಾಗಿ ದೊರೆಯಲಿದೆ ಎಂದು ಸರ್ಕಾರ ತಿಳಿಸಿದೆ.

ADVERTISEMENT

ಮಾರ್ಚ್‌ 1ರಿಂದ ಖಾಸಗಿ ಆಸ್ಪತ್ರೆಗಳಲ್ಲಿ 45 ಹಾಗೂ 60 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಬಹುದು. ಆರೋಗ್ಯ ಸೇತು ಆ್ಯಪ್‌ ಸೇರಿದಂತೆ ಕೋವಿಡ್‌ ಲಸಿಕೆ ವೆಬ್‌ಸೈಟ್‌ಗಳ ಮೂಲಕ ಹೆಸರು ನೋಂದಾಯಿಸಿಕೊಂಡು ಲಸಿಕೆ ಪಡೆದುಕೊಳ್ಳಬಹುದು.

ದೇಶದಲ್ಲಿ ಜನವರಿ 16ರಿಂದ ಕೋವಿಡ್‌ ಲಸಿಕೆ ಅಭಿಯಾನ ಆರಂಭವಾಗಿದ್ದು ಇಲ್ಲಿಯವರೆಗೂ 1 ಕೋಟಿ ಹೆಚ್ಚು ಜನರು ಲಸಿಕೆ ಪಡೆದುಕೊಂಡಿದ್ದಾರೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು ಸೇರಿದಂತೆ ಕೊರೊನಾ ವಾರಿಯರ್ಸ್‌ಗಳಿಗೆ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.