ADVERTISEMENT

Covid-19 India Update: 24 ಗಂಟೆಗಳಲ್ಲಿ 78,357 ಪ್ರಕರಣಗಳು; 1,045 ಮಂದಿ ಸಾವು

ಏಜೆನ್ಸೀಸ್
Published 2 ಸೆಪ್ಟೆಂಬರ್ 2020, 9:20 IST
Last Updated 2 ಸೆಪ್ಟೆಂಬರ್ 2020, 9:20 IST
ಕೊರೊನಾ ವೈರಸ್‌ ಸೋಂಕು ಪರೀಕ್ಷೆ–ಸಾಂದರ್ಭಿಕ ಚಿತ್ರ
ಕೊರೊನಾ ವೈರಸ್‌ ಸೋಂಕು ಪರೀಕ್ಷೆ–ಸಾಂದರ್ಭಿಕ ಚಿತ್ರ   

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್‌–19 ದೃಢಪಟ್ಟ 78,357 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ ಸೋಂಕಿನಿಂದ 1,045 ಮಂದಿ ಸಾವಿಗೀಡಾಗಿದ್ದಾರೆ.

ದೇಶದಲ್ಲಿ ಒಟ್ಟು ಕೊರೊನಾ ವೈರಸ್‌ ಪ್ರಕರಣಗಳು 37,69,524 ಮುಟ್ಟಿದೆ. ಪ್ರಸ್ತುತ 8,01,282 ಸಕ್ರಿಯ ಪ್ರಕರಣಗಳಿದ್ದು, 29,01,909 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೆ 66,333 ಜನ ಕೋವಿಡ್‌ ಕಾರಣದಿಂದ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಮಂಗಳವಾರ ಒಂದೇ ದಿನ 10,12,367 ಗಂಟಲು ದ್ರವ ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಹಾಗೂ ಸೆಪ್ಟೆಂಬರ್ 1ರ ವರೆಗೂ ದೇಶದಲ್ಲಿ ಒಟ್ಟು 4,43,37,201 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್‌ ಪ್ರಕಟಿಸಿದೆ.

ADVERTISEMENT

ಮಹಾರಾಷ್ಟ್ರದಲ್ಲಿ 1,98,866 ಸಕ್ರಿಯ ಪ್ರಕರಣಗಳಿದ್ದು, 5,84,537 ಮಂದಿ ಗುಣಮುಖರಾಗಿದ್ದಾರೆ ಹಾಗೂ 24,903 ಜನ ಸಾವಿಗೀಡಾಗಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 15,870 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ 1,56,728 ಜನ ಗುಣಮುಖರಾಗಿದ್ದು, 4,462 ಮಂದಿ ಸಾವಿಗೀಡಾಗಿದ್ದಾರೆ.

ಕರ್ನಾಟಕದಲ್ಲಿ 91,018 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ 2,54,626 ಮಂದಿ ಗುಣಮುಖರಾಗಿದ್ದು, 5,837 ಜನ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.