ADVERTISEMENT

Covid-19 India Update: 24 ಗಂಟೆಗಳಲ್ಲಿ 83,883 ಹೊಸ ಪ್ರಕರಣಗಳು

ಏಜೆನ್ಸೀಸ್
Published 3 ಸೆಪ್ಟೆಂಬರ್ 2020, 4:44 IST
Last Updated 3 ಸೆಪ್ಟೆಂಬರ್ 2020, 4:44 IST
ಕೊರೊನಾ ವೈರಸ್‌ ಸೋಂಕು ಪರೀಕ್ಷೆ–ಸಾಂದರ್ಭಿಕ ಚಿತ್ರ
ಕೊರೊನಾ ವೈರಸ್‌ ಸೋಂಕು ಪರೀಕ್ಷೆ–ಸಾಂದರ್ಭಿಕ ಚಿತ್ರ   

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್‌–19 ದೃಢಪಟ್ಟ 83,883 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ ಸೋಂಕಿನಿಂದ 1,043 ಮಂದಿ ಸಾವಿಗೀಡಾಗಿದ್ದಾರೆ.

ದೇಶದಲ್ಲಿ ಒಟ್ಟು 38,53,407 ಕೊರೊನಾ ವೈರಸ್‌ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ 8,15,538 ಸಕ್ರಿಯ ಪ್ರಕರಣಗಳಿದ್ದು, 29,70,493 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೆ 67,376 ಜನ ಕೋವಿಡ್‌ ಕಾರಣದಿಂದ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬುಧವಾರ ಒಂದೇ ದಿನ 11,72,179 ಗಂಟಲು ದ್ರವ ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಹಾಗೂ ಸೆಪ್ಟೆಂಬರ್ 2ರ ವರೆಗೂ ದೇಶದಲ್ಲಿ ಒಟ್ಟು 4,55,09,380 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್‌ ಪ್ರಕಟಿಸಿದೆ.

ADVERTISEMENT

ಮಹಾರಾಷ್ಟ್ರದಲ್ಲಿ 2,02,048 ಸಕ್ರಿಯ ಪ್ರಕರಣಗಳಿದ್ದು, 5,98,496 ಮಂದಿ ಗುಣಮುಖರಾಗಿದ್ದಾರೆ ಹಾಗೂ 24,903 ಜನ ಸಾವಿಗೀಡಾಗಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 16,502 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ 1,58,586 ಜನ ಗುಣಮುಖರಾಗಿದ್ದು, 4,481 ಮಂದಿ ಸಾವಿಗೀಡಾಗಿದ್ದಾರೆ.

ಕರ್ನಾಟಕದಲ್ಲಿ 94,478 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ 2,60,913 ಮಂದಿ ಗುಣಮುಖರಾಗಿದ್ದು, 5,950 ಜನ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.