ADVERTISEMENT

ದೆಹಲಿ: ಒಂದೇ ದಿನ 15 ಸಾವಿರ ದಾಟಿದ ಕೋವಿಡ್ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಜನವರಿ 2022, 13:28 IST
Last Updated 6 ಜನವರಿ 2022, 13:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗಿವೆ. ಗುರುವಾರ ಸಂಜೆಯವರಗೂ ಕೊನೆಗೊಂಡ ಕಳೆದ 24 ಗಂಟೆಗಳ ಅವಧಿಯಲ್ಲಿ 15,097 ಹೊಸ ಪ್ರಕರಣಗಳು ವರದಿಯಾಗಿವೆ.

ದೆಹಲಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 31,498ಕ್ಕೆ ಏರಿಕೆಯಾಗಿದೆ. ಕೋವಿಡ್ ಸೋಂಕು ದೃಢ ಪ್ರಮಾಣ ಶೇ 15.34ಕ್ಕೆ ತಲುಪಿರುವುದು ಕಳವಳಕಾರಿ ಎನಿಸಿದೆ.

ಬುಧವಾರದಂದು ದೆಹಲಿಯಲ್ಲಿ 10,665 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದವು. ಪಾಸಿಟಿವಿಟಿ ದರ ಶೇ 11.88ರಷ್ಟಿತ್ತು.

ADVERTISEMENT

ಈ ಅವಧಿಯಲ್ಲಿ 6,900 ಮಂದಿ ಗುಣಮುಖರಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ.

ಕೋವಿಡ್ ಪರಿಸ್ಥಿತಿಯನ್ನು ಎದುರಿಸಲು ಸರ್ವ ಸನ್ನದ್ಧರಾಗಿದ್ದೇವೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಗುರುವಾರ ತಿಳಿಸಿದ್ದಾರೆ.

'ನಾವು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪರೀಕ್ಷೆಯನ್ನು ಮಾಡುತ್ತಿದ್ದೇವೆ. ಅದನ್ನು ಮಾಡದಿದ್ದರೆ ಹೊಸ ಪ್ರಕರಣಗಳ ಸಂಖ್ಯೆ 500ರಿಂದ 1,000ಕ್ಕೆ ಕಡಿಮೆಯಾಗಬಹುದು. ಬಹಳಷ್ಟು ರಾಜ್ಯಗಳು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗಳನ್ನು ನಡೆಸುತ್ತಿಲ್ಲ. ಆದರೆ ನಾವು ಪಾರದರ್ಶಕರಾಗಿದ್ದೇವೆ' ಎಂದು ಹೇಳಿದರು.

'ಈಗಾಗಲೇ ವಾರಾಂತ್ಯದ ಕರ್ಫ್ಯೂ ಸೇರಿದಂತೆ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದೇವೆ. ಓಮೈಕ್ರಾನ್ ಬಗ್ಗೆ ಆತಂಕಗೊಳ್ಳುವ ಅಗತ್ಯವಿಲ್ಲ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.