ADVERTISEMENT

Covid-19 India Update: 40,134 ಹೊಸ ಪ್ರಕರಣಗಳು, 422 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಆಗಸ್ಟ್ 2021, 4:54 IST
Last Updated 2 ಆಗಸ್ಟ್ 2021, 4:54 IST
ಪಟನಾದಲ್ಲಿ ಮಹಿಳೆಯೊಬ್ಬರಿಗೆ ಕಾರಿನಲ್ಲೇ ಕೋವಿಡ್‌–19 ಲಸಿಕೆ ಹಾಕುತ್ತಿರುವುದು– ಪಿಟಿಐ ಚಿತ್ರ
ಪಟನಾದಲ್ಲಿ ಮಹಿಳೆಯೊಬ್ಬರಿಗೆ ಕಾರಿನಲ್ಲೇ ಕೋವಿಡ್‌–19 ಲಸಿಕೆ ಹಾಕುತ್ತಿರುವುದು– ಪಿಟಿಐ ಚಿತ್ರ   

ನವದೆಹಲಿ: ದೇಶದಾದ್ಯಂತ ಸೋಮವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 40,134 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 422 ಮಂದಿ ಸಾವಿಗೀಡಾಗಿದ್ದು, 36,946 ಮಂದಿ ಗುಣಮುಖರಾಗಿದ್ದಾರೆ. ಚೇತರಿಕೆ ಪ್ರಮಾಣಕ್ಕಿಂತ ಸೋಂಕು ದೃಢಪಟ್ಟ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದೆ.

ಒಟ್ಟು 3,16,95,958 ಪ್ರಕರಣಗಳ ಪೈಕಿ, ಈವರೆಗೂ 3,08,57,467 ಮಂದಿ ಚೇತರಿಸಿಕೊಂಡಿದ್ದಾರೆ ಹಾಗೂ 4,24,773 ಜನ ಮೃತಪಟ್ಟಿದ್ದಾರೆ. ದೇಶದಲ್ಲಿ ಪ್ರಸ್ತುತ 4,13,718 ಪ್ರಕರಣಗಳು ಸಕ್ರಿಯವಾಗಿವೆ.

ಕಳೆದ 24 ಗಂಟೆಗಳಲ್ಲಿ 17,06,598 ಡೋಸ್‌ಗಳಷ್ಟು ಲಸಿಕೆ ಹಾಕಲಾಗಿದೆ ಮತ್ತು 14,28,984 ಗಂಟಲು ದ್ರವ ಮಾದರಿ ಸಂಗ್ರಹಿಸಿ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ. ಒಟ್ಟು 47.22 ಕೋಟಿಗೂ ಅಧಿಕ ಡೋಸ್‌ ಲಸಿಕೆ ಹಾಕಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.

ADVERTISEMENT

ಕೇರಳದಲ್ಲಿ 1,67,891 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 82,350 ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ 24,168 ಪ್ರಕರಣಗಳು ಸಕ್ರಿಯವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.