ADVERTISEMENT

Covid-19 India Update | 7.2 ಲಕ್ಷ ಸೋಂಕಿತರು, 20ಸಾವಿರ ದಾಟಿದ ಸಾವಿನ ಸಂಖ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಜುಲೈ 2020, 4:50 IST
Last Updated 7 ಜುಲೈ 2020, 4:50 IST
   

ನವದೆಹಲಿ: ದೇಶದಾದ್ಯಂತ ಕೊರೊನಾ ವೈರಸ್‌ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಸೋಮವಾರ ಒಂದೇ ದಿನ ಒಟ್ಟು22,252 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿತರಸಂಖ್ಯೆ 7 ಲಕ್ಷ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಇದುವರೆಗೆ ಒಟ್ಟು7,19,665 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ4,39,947 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.20,160 ಮಂದಿ ಮೃತಪಟ್ಟಿದ್ದು, ಇನ್ನೂ 2,59,557 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ.

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 5,368ಹೊಸ ಪ್ರಕರಣಗಳು ವರದಿಯಾಗಿದ್ದು,204 ಜನ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ2,11,987 ತಲುಪಿದ್ದು, ಮೃತಪಟ್ಟವರ ಸಂಖ್ಯೆಯ9,026ಕ್ಕೆ ಏರಿಕೆಯಾಗಿದೆ.

ADVERTISEMENT

ತಮಿಳುನಾಡಿನಲ್ಲಿ3,827 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು,61 ಸಾವು ಸಂಭವಿಸಿದೆ. ಒಟ್ಟು ಸೋಂಕಿತರ ಸಂಖ್ಯೆ1,14,978ಕ್ಕೆ ಏರಿಕೆಯಾಗಿದೆ. ಈವರೆಗೆ1,571 ಮಂದಿ ಅಸುನೀಗಿದ್ದಾರೆ.

ದೆಹಲಿಯಲ್ಲಿ1,379 ಹೊಸ ಪ್ರಕರಣಗಳು ಪತ್ತೆಯಾಗಿದ್ದು,48 ಮಂದಿ ಮೃತಪಟ್ಟಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ1,00,823 ತಲುಪಿದ್ದು, ಸಾವಿನ ಸಂಖ್ಯೆ3,115 ತಲುಪಿದೆ.

ಕರ್ನಾಟಕದಲ್ಲಿ ಸೋಮವಾರ ಸಂಜೆ 5ರ ವೇಳೆಗೆಸೋಂಕಿತರ ಸಂಖ್ಯೆ 25,317ಕ್ಕೆ ತಲುಪಿದ್ದು, 401 ಮಂದಿ ಮೃತಪಟ್ಟಿದ್ದಾರೆ.14,385 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.