ADVERTISEMENT

ಕೋವಿಡ್‌–19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 991 ಪ್ರಕರಣ, 43 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಏಪ್ರಿಲ್ 2020, 3:31 IST
Last Updated 18 ಏಪ್ರಿಲ್ 2020, 3:31 IST
ಪ್ರಯೋಗಾಲಯದಲ್ಲಿ ಕೋವಿಡ್‌–19 ಸೋಂಕು ಪರೀಕ್ಷೆ– ಸಾಂಕೇತಿಕ ಚಿತ್ರ
ಪ್ರಯೋಗಾಲಯದಲ್ಲಿ ಕೋವಿಡ್‌–19 ಸೋಂಕು ಪರೀಕ್ಷೆ– ಸಾಂಕೇತಿಕ ಚಿತ್ರ   
""

ಬೆಂಗಳೂರು:ದೇಶದಾದ್ಯಂತಕಳೆದ 24 ಗಂಟೆಗಳಲ್ಲಿ 991ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿಗೆ 43ಮಂದಿ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿನಿಂದ ಸಾವಿಗೀಡಾದವರಸಂಖ್ಯೆ 480ಮುಟ್ಟಿದೆ.

ಕೋವಿಡ್‌–19 ದೃಢಪಟ್ಟ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಶನಿವಾರಬೆಳಿಗ್ಗೆ 8ರ ವರೆಗೂ ದೇಶದಲ್ಲಿ ಒಟ್ಟು ಸೋಂಕು ಪ್ರಕರಣಗಳು 14,378ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೆಬ್‌ಸೈಟ್‌ನಲ್ಲಿ ಮಾಹಿತಿ ಪ್ರಕಟಗೊಂಡಿದೆ.

ದೇಶದಾದ್ಯಂತ ದಾಖಲಾಗಿರುವ ಒಟ್ಟು14,378 ಕೋವಿಡ್‌–19 ಪ್ರಕರಣಗಳ ಪೈಕಿ 1,992 ಜನ ಗುಣಮುಖರಾಗಿದ್ದಾರೆ. ವಿವಿಧ ರಾಜ್ಯಗಳಲ್ಲಿ 11,903ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 480 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಮಹಾರಾಷ್ಟ್ರದಲ್ಲಿ ಒಟ್ಟು 3,323 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದ ಈಗಾಗಲೇ 201 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಸಾವು ಮಹಾರಾಷ್ಟ್ರದಲ್ಲಿ ದಾಖಲಾಗಿದೆ. ಇನ್ನೂ ದೆಹಲಿಯಲ್ಲಿ ಒಟ್ಟು1,707 ಪ್ರಕರಣಗಳು, 42 ಮಂದಿ ಸಾವು; ತಮಿಳುನಾಡಿನಲ್ಲಿ 1,323ಪ್ರಕರಣಗಳು,15 ಮಂದಿ ಸಾವು; ರಾಜಸ್ಥಾನದಲ್ಲಿ 1,229 ಪ್ರಕರಣಗಳು,11ಮಂದಿ ಸಾವಿಗೀಡಾಗಿದ್ದಾರೆ.

ಕರ್ನಾಟಕದಲ್ಲಿ 359ಸೋಂಕು ಪ್ರಕರಣಗಳು ದಾಖಲಾಗಿದ್ದು,13 ಮಂದಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದಲ್ಲಿ 1,310 ಸೋಂಕು ಪ್ರಕರಣಗಳ ಪೈಕಿ 69ಮಂದಿ ಬಲಿಯಾಗಿದ್ದಾರೆ. ಆಂಧ್ರ ಪ್ರದೇಶದಲ್ಲಿ 572ಪ್ರಕರಣ,14 ಮಂದಿ ಸಾವು ಹಾಗೂ ತೆಲಂಗಾಣದಲ್ಲಿ 776ಪ್ರಕರಣಗಳು,18 ಜನ ಸಾವಿಗೀಡಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಸೋಂಕು ಪ್ರಕರಣ 849ತಲುಪಿದ್ದು,14ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.