ADVERTISEMENT

India COVID-19 Update: 16,741ಕ್ಕೆ ಇಳಿದ ಸಕ್ರಿಯ ಪ್ರಕರಣಗಳು 

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2022, 6:26 IST
Last Updated 31 ಮಾರ್ಚ್ 2022, 6:26 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ದೇಶದಲ್ಲಿ ಒಂದೇ ದಿನ1,660 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ16,741ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಕಳೆದ 24 ಗಂಟೆಗ ಅವಧಿಯಲ್ಲಿ 82 ಸೋಂಕಿತರು ಸಾವಿಗೀಡಾಗಿದ್ದಾರೆ. ಇಲ್ಲಿಯವರೆಗೂ ಕೋವಿಡ್‌ನಿಂದ5,16,757 ಜನರು ಮೃತಪಟ್ಟಿದ್ದಾರೆ. ಸೋಂಕಿತರ ಒಟ್ಟು ಸಂಖ್ಯೆ 4,30,16,397ಕ್ಕೆ ಏರಿಕೆಯಾಗಿದೆ.

ಕೇರಳ ಹಾಗೂ ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳು ಕೋವಿಡ್‌ನಿಂದ ಮೃತಪಟ್ಟವರ ಹಿಂದಿನ ಸಂಖ್ಯೆಯ (ಬ್ಯಾಕ್‌ಲಾಗ್) ವರದಿ ನೀಡಿವೆ. 4200 ಜನರು ಮೃತಪಟ್ಟಿರುವುದು ವರದಿಯಾಗಿದೆ.

ADVERTISEMENT

ನಿನ್ನೆಯವರೆಗೂ ದೇಶದಲ್ಲಿ 182.87 ಕೋಟಿ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.