ADVERTISEMENT

Covid-19 India Update: ಕೋವಿಡ್‌ನಿಂದ 167 ದಿನಗಳಲ್ಲಿ ಅತಿ ಕಡಿಮೆ ಸಾವು ವರದಿ

ಪಿಟಿಐ
Published 6 ಸೆಪ್ಟೆಂಬರ್ 2021, 5:34 IST
Last Updated 6 ಸೆಪ್ಟೆಂಬರ್ 2021, 5:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ದೇಶದಲ್ಲಿ ಸೋಮವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿಹೊಸದಾಗಿ 38,948 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆಯು 3,30,27,621ಕ್ಕೆ ಏರಿಕೆಯಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

‘ಇದೇ ಅವಧಿಯಲ್ಲಿ 219 ಮಂದಿ ಮೃತಪ‍ಟ್ಟಿದ್ದು, ಇದು 167 ದಿನಗಳಲ್ಲಿ ವರದಿಯಾದ ಅತಿ ಕಡಿಮೆ ಸಾವಿನ ಸಂಖ್ಯೆಯಾಗಿದೆ. ಒಟ್ಟು ಸಾವಿನ ಸಂಖ್ಯೆ 4,40,752ಕ್ಕೆ ಏರಿದೆ. ದೇಶದಲ್ಲಿ ಸಾವಿನ ಪ್ರಮಾಣವು ಶೇಕಡ 1.33ಕ್ಕೆ ಇಳಿದಿದೆ’ ಎಂದು ತಿಳಿಸಲಾಗಿದೆ.

‘ದೇಶದಲ್ಲಿ ಸಕ್ರಿಯ ಪ್ರಕರಣಗಳು 4,04,874ಕ್ಕೆ ಇಳಿಕೆಯಾಗಿದ್ದು, ಇದು ಒಟ್ಟು ಪ್ರಕರಣಗಳ ಪೈಕಿ ಶೇಕಡ 1.23ರಷ್ಟು ಪಾಲನ್ನು ಹೊಂದಿದೆ. ದೇಶದಲ್ಲಿ ಚೇತರಿಕೆ ‍ಪ್ರಮಾಣ ಶೇಕಡ 97.44ರಷ್ಟಿದೆ’ ಎಂದು ಮಾಹಿತಿ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.