ADVERTISEMENT

Covid India Update| 24 ಗಂಟೆಗಳಲ್ಲಿ 20,551 ಪ್ರಕರಣ, 70 ಸಾವು

ಪಿಟಿಐ
Published 5 ಆಗಸ್ಟ್ 2022, 5:37 IST
Last Updated 5 ಆಗಸ್ಟ್ 2022, 5:37 IST
ಕೋವಿಡ್‌ ಪತ್ತೆ ಪರೀಕ್ಷೆಯ ಪ್ರಾತಿನಿಧಿಕ ಚಿತ್ರ (ಪಿಟಿಐ)
ಕೋವಿಡ್‌ ಪತ್ತೆ ಪರೀಕ್ಷೆಯ ಪ್ರಾತಿನಿಧಿಕ ಚಿತ್ರ (ಪಿಟಿಐ)   

ನವದೆಹಲಿ: ಶುಕ್ರವಾರ ಬೆಳಗ್ಗೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ಭಾರತ 20,551 ಹೊಸ ಕೋವಿಡ್‌ ಪ್ರಕರಣಗಳನ್ನು ಕಂಡಿದೆ. ಇದರೊಂದಿಗೆ ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 4,41,07,588ಕ್ಕೆ ತಲುಪಿದೆ. ಇದೇ ಅವಧಿಯಲ್ಲಿ 70 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಸಾವಿನ ಸಂಖ್ಯೆ 5,26,600ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ದೇಶದಲ್ಲಿ 1,35,364 ಸಕ್ರಿಯ ಪ್ರಕರಣಗಳು ಇವೆ.

ADVERTISEMENT

ದೇಶದಲ್ಲಿ ಕೊರೊನಾ ವೈರಸ್‌ನ ದೈನಂದಿನ ಪಾಸಿಟಿವಿಟಿ ದರ ಶೇಕಡ 5.14ರಷ್ಟು ಇದೆ.

ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ 205.59 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.

ಯಾವ ರಾಜ್ಯದಲ್ಲಿ ಎಷ್ಟು ಸಾವು?

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 70 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಏಳು, ದೆಹಲಿ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ನಾಲ್ಕು, ಕರ್ನಾಟಕ ಮತ್ತು ಪಂಜಾಬ್‌ನಲ್ಲಿ ತಲಾ ಮೂರು, ಮಣಿಪುರ, ಒಡಿಶಾ, ರಾಜಸ್ಥಾನ, ತ್ರಿಪುರ ಮತ್ತು ಉತ್ತರ ಪ್ರದೇಶದಲ್ಲಿ ತಲಾ ಇಬ್ಬರು ಮತ್ತು ಅಸ್ಸಾಂ, ಛತ್ತೀಸ್‌ಗಢ, ಗೋವಾ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಕೇರಳ, ಮಧ್ಯಪ್ರದೇಶ, ಮೇಘಾಲಯ, ಮಿಜೋರಾಂ, ಸಿಕ್ಕಿಂ ಮತ್ತು ಉತ್ತರಾಖಂಡ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.