ADVERTISEMENT

Covid-19 India Update: ದೇಶದಲ್ಲಿ 5,08,953 ಪ್ರಕರಣ, 2,95,881 ಮಂದಿ ಗುಣಮುಖ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಜೂನ್ 2020, 4:19 IST
Last Updated 27 ಜೂನ್ 2020, 4:19 IST
ಕೊರೊನಾ ವೈರಸ್ ಸೋಂಕು ಪರೀಕ್ಷೆ– ಸಾಂದರ್ಭಿಕ ಚಿತ್ರ
ಕೊರೊನಾ ವೈರಸ್ ಸೋಂಕು ಪರೀಕ್ಷೆ– ಸಾಂದರ್ಭಿಕ ಚಿತ್ರ   

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 18,552 ಪ್ರಕರಣಗಳು ದಾಖಲಾಗಿವೆ. ಒಂದೇ ದಿನದಲ್ಲಿ ಅತಿ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 5 ಲಕ್ಷ ದಾಟಿದೆ.

ಒಂದೇ ದಿನ 384 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಒಟ್ಟು 5,08,953 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಮೃತರ ಸಂಖ್ಯೆಯು 15,685ಕ್ಕೆ ಏರಿಕೆಯಾಗಿದೆ. ಸದ್ಯ 1,97,387 ಸಕ್ರಿಯ ಪ್ರಕರಣಗಳಿದ್ದು, 2,95,881 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ADVERTISEMENT

ಜೂನ್‌ 26ರ ವರೆಗೂ 79,96,707 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ 2,20,479 ಗಂಟಲು ದ್ರವ ಮಾದರಿಗಳ ಪರೀಕ್ಷೆ ನಡೆಸಿರುವುದಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಹೇಳಿದೆ.

ತೀವ್ರ ಕೋವಿಡ್‌-19 ಹೊಡೆತಕ್ಕೆ ಒಳಗಾಗಿರುವ ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 1,52,765 ಪ್ರಕರಣಗಳು ದಾಖಲಾಗಿದ್ದು, 65,844 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಈವರೆಗೆ 79,815 ಮಂದಿ ಗುಣಮುಖರಾಗಿದ್ದು, 7,106 ಜನರು ಮೃತರಾಗಿದ್ದಾರೆ.

ದೆಹಲಿಯಲ್ಲಿ ಒಟ್ಟಾರೆ 77,240 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 27,657 ಸಕ್ರಿಯ ಪ್ರಕರಣಗಳಿದ್ದು, 47,091 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 2,492 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.