ADVERTISEMENT

Covid-19 India Update: ದೇಶದಲ್ಲಿ ಒಟ್ಟು ಪ್ರಕರಣಗಳ ಪೈಕಿ ಶೇ 93.76 ಗುಣಮುಖ

ಏಜೆನ್ಸೀಸ್
Published 24 ನವೆಂಬರ್ 2020, 4:46 IST
Last Updated 24 ನವೆಂಬರ್ 2020, 4:46 IST
ಕೊರೊನಾ ವೈರಸ್‌ ಸೋಂಕು ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹ–ಸಾಂದರ್ಭಿಕ ಚಿತ್ರ
ಕೊರೊನಾ ವೈರಸ್‌ ಸೋಂಕು ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹ–ಸಾಂದರ್ಭಿಕ ಚಿತ್ರ   

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್‌–19 ದೃಢಪಟ್ಟ 37,975 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 480 ಮಂದಿ ಮೃತಪಟ್ಟಿದ್ದಾರೆ.

ಮಂಗಳವಾರ ಬೆಳಗ್ಗಿನ ವರೆಗೂ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 91,77,841 ಮುಟ್ಟಿದ್ದು, ಈ ಪೈಕಿ 86,04,955 ಮಂದಿ ಗುಣಮುಖರಾಗಿದ್ದಾರೆ ಹಾಗೂ 1,34,218 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 4,38,667 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 42,314 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಸರ್ಕಾರ ಅಂಕಿಅಂಶಗಳ ಪ್ರಕಾರ, ಒಟ್ಟು ಪ್ರಕರಣಗಳ ಪೈಕಿ ಶೇ 93.76 ಗುಣಮುಖರಾಗಿದ್ದಾರೆ ಹಾಗೂ ಶೇ 1.46ರಷ್ಟು ಸಾವು ಸಂಭವಿಸಿದೆ. ಪ್ರಸ್ತುತ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 4.78.

ADVERTISEMENT

ಐಸಿಎಂಆರ್‌ ಪ್ರಕಾರ, ದೇಶದಲ್ಲಿ ಒಟ್ಟು 13,36,82,275 ಗಂಟಲು ದ್ರವ ಮಾದರಿಗಳಿಗೆ ಕೋವಿಡ್‌ –19 ಪರೀಕ್ಷೆ ಮಾಡಲಾಗಿದೆ. ಸೋಮವಾರ ಒಂದೇ ದಿನ 10,99,545 ಮಾದರಿಗಳಿಗೆ ಪರೀಕ್ಷೆ ನಡೆಸಲಾಗಿದೆ.

ಮಹಾರಾಷ್ಟ್ರದಲ್ಲಿ 82,915 ಸಕ್ರಿಯ ಪ್ರಕರಣಗಳು, ಕೇರಳದಲ್ಲಿ64,292, ದೆಹಲಿಯಲ್ಲಿ 37,329 ಹಾಗೂ ಪಶ್ಚಿಮ ಬಂಗಾಳದಲ್ಲಿ 25,030 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.