ADVERTISEMENT

ಭಾರತದಲ್ಲಿ ಶೇ 55 ಜನರಿಗೆ ಎರಡೂ ಡೋಸ್ ಲಸಿಕೆ

ಪಿಟಿಐ
Published 14 ಡಿಸೆಂಬರ್ 2021, 10:46 IST
Last Updated 14 ಡಿಸೆಂಬರ್ 2021, 10:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ (ಪಿಟಿಐ): ‘ದೇಶದಲ್ಲಿ ಶೇ 55ರಷ್ಟು ಅರ್ಹ ವಯಸ್ಕರಿಗೆ ಕೋವಿಡ್‌–19 ವಿರುದ್ಧ ಎರಡೂ ಡೋಸ್‌ ಲಸಿಕೆ ನೀಡಲಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಅವರು ತಿಳಿಸಿದ್ದಾರೆ.

‘ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಈ ಮೂಲಕ ಭಾರತ ಇನ್ನೊಂದು ಮೈಲುಗಲ್ಲು ಸಾಧಿಸಿದೆ. ‘ಹರ್‌ ಘರ್‌ ದಸ್ತಕ್‌’ ಅಭಿಯಾನವು ಲಸಿಕೆ ಕಾರ್ಯಕ್ರಮವನ್ನು ಇನ್ನಷ್ಟು ಬಲಪಡಿಸಿದೆ’ ಎಂದು ಟ್ವೀಟ್ ಮಾಡಿದ್ದಾರೆ.

ಆರೋಗ್ಯ ಸಚಿವಾಲಯ ಈ ಕುರಿತು ಹೇಳಿಕೆ ನೀಡಿದ್ದು, ಶೇ 55.52ರಷ್ಟು ಅರ್ಹ ಜನರಿಗೆ ಎರಡು ಡೋಸ್‌, ಶೇ 87ರಷ್ಟು ಮಂದಿಗೆ ಒಂದು ಡೋಸ್ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.

ADVERTISEMENT

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 66,98,601 ಲಸಿಕೆ ಡೋಸ್‌ ನೀಡಲಾಗಿದೆ. ತಾತ್ಕಾಲಿಕ ವರದಿ ಅನುಸಾರ 133.88 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.