ADVERTISEMENT

ಕೋವಿಡ್‌: ಸಾರ್ವಜನಿಕ ಕಾರ್ಯಕ್ರಮ ರದ್ದುಗೊಳಿಸಿದ ಶರದ್‌ ಪವಾರ್‌

ಪಿಟಿಐ
Published 22 ಫೆಬ್ರುವರಿ 2021, 7:52 IST
Last Updated 22 ಫೆಬ್ರುವರಿ 2021, 7:52 IST
ಶರದ್‌ ಪವಾರ್‌
ಶರದ್‌ ಪವಾರ್‌   

ಮುಂಬೈ: ‘ಮಹಾರಾಷ್ಟ್ರದಲ್ಲಿ ಕೋವಿಡ್‌ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದೇನೆ’ ಎಂದು ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಅವರು ಸೋಮವಾರ ತಿಳಿಸಿದರು.

‘ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸೋಮವಾರದಿಂದ ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ಸಭೆಗಳಿಗೆ ನಿರ್ಬಂಧ ಹೇರಲಾಗಿದೆ’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಭಾನುವಾರ ಸೂಚಿಸಿದ್ದರು.

‘ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯ ಮನವಿಯಂತೆ ನಾನು ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದೇನೆ’ ಎಂದು ಶರದ್‌ ಪವಾರ್‌ ಟ್ವೀಟ್‌ ಮಾಡಿದ್ದಾರೆ.

ADVERTISEMENT

ಸುಪ್ರಿಯಾ ಸುಳೆ ಅವರು ಕೂಡ ಮುಖ್ಯಮಂತ್ರಿ ಅವರ ಮನವಿ ಮೇರೆಗೆ ಫೆಬ್ರುವರಿ 22 ಮತ್ತು ಮಾರ್ಚ್‌ 7 ರಂದು ನಿಗದಿಯಾಗಿದ್ದ ಕಾರ್ಯಕ್ರಮಗಳನ್ನು ಮುಂದೂಡಿದ್ದಾರೆ.

‘ಮಹಾರಾಷ್ಟ್ರದಲ್ಲಿ ಈವರೆಗೆ 51,788 ಜನರು ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ’ ಎಂದು ಅಧಿಕೃತ ಅಂಕಿಅಂಶ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.